News Karnataka Kannada
Thursday, May 09 2024
ಉಡುಪಿ

ಉಡುಪಿ: ನಗರ ಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ, ತಳ್ಳುಗಾಡಿ, ಗೂಡಂಗಡಿಗಳ ತೆರವು

Udupi: Municipal corporation officials carry out operations, removing push carts, stalls
Photo Credit : By Author

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದ 15ಕ್ಕೂ ಅಧಿಕ ಗೂಡಾಂಗಡಿ, ತಳ್ಳುಗಾಡಿಗಳನ್ನು ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದರು.

ರಸ್ತೆ ಬದಿಯಲ್ಲಿರುವ ಗೂಡಂಗಡಿ, ಬೀದಿಬದಿ ವ್ಯಾಪಾರಿಗಳಿಂದ ನಡೆದಾಡಲು ಹಾಗೂ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಮಿಂಚಿನ ಕಾರ್ಯಾಚರಣೆ ನಡೆಸಿದರು. ನಗರಸಭೆ ಆರೋಗ್ಯ ಅಧಿಕಾರಿ ಕರುಣಾಕರ ಅವರ ನೇತೃತ್ವದಲ್ಲಿ ಪೊಲೀಸ್ ಭದ್ರತೆಯಲ್ಲಿ 15ಕ್ಕೂ ಅಧಿಕ ತಳ್ಳುಗಾಡಿ, ಗೂಡಂಗಡಿಗಳನ್ನು ತೆರವು ಮಾಡಲಾಯಿತು.

ಅಧಿಕಾರಿಗಳ ದಿಢೀರ್ ಕಾರ್ಯಾಚರಣೆಗೆ ಆಕ್ರೋಶ:
ಅಧಿಕಾರಿಗಳ ಕಾರ್ಯಾಚರಣೆ ವಿರುದ್ಧ ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಮಾಹಿತಿ ನೀಡದೇ ಏಕಾಏಕಿ ಬಂದು ನಮ್ಮ ಹಣ್ಣುಗಳನ್ನು ಕಸದ ರೀತಿಯಲ್ಲಿ ಕೊಂಡು ಹೋಗಿದ್ದಾರೆ. 30 ರಿಂದ 50 ಸಾವಿರ ರೂ. ಹಣ್ಣುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೆ ನಗರ ಸಭೆಯ ಡ್ರೈವರ್ ಕೂಡಾ ಹಲ್ಲೆ ಮಾಡಿದ್ದಾರೆ ಎಂದು ಬೀದಿ ಬದಿ ವ್ಯಾಪಾರಿ ಬಸವ ರೆಡ್ಡಿ ಆರೋಪಿಸಿದರು.

ನಮ್ಮ ಹಣ್ಣುಗಳನ್ನು ವಾಪಾಸು ನೀಡಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು