ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಮಟ್ಟದ “ಯಕ್ಷಗಾನ ಸಾಹಿತ್ಯ ಸಮ್ಮೇಳನ” 2023ರ ಫೆಬ್ರವರಿ 11 ಮತ್ತು 12 ರಂದು ನಡೆಯಲಿದ್ದು, ಇದರ ಪೂರ್ವ ತಯಾರಿ ಬಗ್ಗೆ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಅರು ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಜಿ. ಎಲ್ ಹೆಗ್ಡೆ, ಯಕ್ಷಗಾನ ಕಲಾರಂಗ ರಿ. ಉಡುಪಿ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಂಟಿ ನಿರ್ದೇಶಕರಾದ ಅಶೋಕ್ ಎನ್. ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ. ಎಸ್. ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.