News Karnataka Kannada
Sunday, May 05 2024
ಉಡುಪಿ

ಉಡುಪಿ: ಅನಧಿಕೃತ ಪ್ರಾಣಿ ವಧೆ ತಡೆ – ಜಿಲ್ಲಾಧಿಕಾರಿ ಕೂರ್ಮಾರಾವ್

Prevention of unauthorized slaughter of animals: Deputy Commissioner Koorma Rao
Photo Credit : News Kannada

ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಧಿಕೃತ ಪ್ರಾಣಿ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದರು. ಜಿಲ್ಲೆಯಾದ್ಯಂತ ನಿಯೋಜಿಸಲಾದ ಚೆಕ್‌ಪೋಸ್ಟ್ ಗಳಲ್ಲಿ, ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ವಹಿಸಬೇಕು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.

ಅನಧಿಕೃತವಾಗಿ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಲಾದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ತರಹದ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ನಗರಸಭೆ ಪೌರಾಯುಕ್ತ ರಮೇಶ್ ನಾಯಕ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು