ಉಡುಪಿ

ಉಡುಪಿ: ಬಿಜೆಪಿ ಟಿಕೆಟ್’ಗೆ ಮಧ್ವರಾಜ್ ರಿಂದ ಅವಕಾಶವಾದಿ ರಾಜಕಾರಣ- ರಮೇಶ್ ಕಾಂಚನ್ ಟೀಕೆ

ಉಡುಪಿ: “ನಮೋ” ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದಿ ರಾಜಕಾರಣವನ್ನು ಮಾಡುತ್ತಿದ್ದಾರೆ. ಕಳೆದ ಬಾರಿ ಖಾಸಗಿ ಪತ್ರಿಕೆಯೊಂದರ ಸಮೀಕ್ಷೆಯ‌ಲ್ಲಿ ರಾಜ್ಯಕ್ಕೆ ನಂಬರ್ ಒನ್ ಶಾಸಕನಾಗಿ ಮೂಡಿ ಬಂದರೂ ಬಿಜೆಪಿಯ ಕಾರ್ಯಕರ್ತರು ಸೋಲಿಸಿದ್ದಾರೆ. ನನಗೆ ಕಿಂಚಿತ್ತೂ ಬೇಸರವಿಲ್ಲ. ಮೋದಿಯವರ ಕೈ ಬಲಪಡಿಸಲು ನನ್ನನ್ನು ಸೋಲಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಮಾತುಗಳು ಇವರ ಅವಕಾಶವಾದಿ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಪಕ್ಷವು ಐದು ಭಾರೀ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಹಲವು ಬಾರಿ ಸೋತ ಹೊರತಾಗಿಯೂ ಕಾಂಗ್ರೆಸ್ ಪಕ್ಷ ಅವರ ಕೈ ಬಿಟ್ಟಿರಲಿಲ್ಲ. 2013ರಲ್ಲಿ ಗೆಲುವು ಸಾಧಿಸಿದಾಗ ಅವರನ್ನು ರಾಜ್ಯ ನಾಯಕರನ್ನಾಗಿ ಬೆಳೆಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಅವರಿಗೆ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ, ಸಚಿವರಾಗಿ, ನಂತರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಸ್ಥಾನ‌ಮಾನ ನೀಡಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಪ್ರಮೋದ್ ಮಧ್ವರಾಜ್ ಅವರ ಗೆಲುವಿಗಾಗಿ ಹಗಲಿರುಳು ದುಡಿದಕ್ಕಾಗಿ ಅವರು ಆ ಸ್ಥಾನಕ್ಕೆ ತಲುಪಲು ಸಾಧ್ಯವಾಯಿತು. ಆದರೆ ಅವರು ಯಾರ ಬಳಿಯೂ ಚರ್ಚಿಸದೇ, ಯಾರ ಬಳಿಯೂ ತಿಳಿಸದೆ, ಅವರ ಗೆಲುವಿಗಾಗಿ ಶ್ರಮಿಸಿದ ನಾಯಕರ ಹಾಗೂ ಕಾರ್ಯಕರ್ತರ ಭಾವನೆಗೆ ಬೆಲೆಯೂ ಕೊಡದೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುತ್ತಲೇ ಬಂದಿದ್ದಾರೆ.

ಇದೀಗ ಬಿಜೆಪಿಯ ನಾಯಕರನ್ನು, ಬಿಜೆಪಿಯ ಕಾರ್ಯಕರ್ತರನ್ನು ಒಲೈಸಲು, ಬಿಜೆಪಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಇವರ ಈ ಅವಕಾಶವಾದಿ ರಾಜಕಾರಣ ಜನರಿಗೆ ಅರ್ಥವಾಗಿದ್ದು ಮುಂದಿನ ದಿನಗಳಲ್ಲಿ ಜನರೇ ಪ್ರಮೋದ್ ಮಧ್ವರಾಜ್ ಅವರಿಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Ashika S

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

3 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

13 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

14 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

37 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

47 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

52 mins ago