ಉಡುಪಿ

ಉಡುಪಿ: ಯುವ ಮತದಾರರ ನೋಂದಣಿ ನಿರಂತರವಾಗಿರಲಿ ಎಂದ ಮನೋಜ್ ಜೈನ್

ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 8122 ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗಧಿಪಡಿಸಿರುವ ನಿಗಧಿತ ದಿನಾಂಕಗಳಂದು ನೊಂದಣಿ ಮಾಡಲು ಆದ್ಯತೆ ನೀಡುವಂತೆ ಸೂಚಿಸಿದರು.

ಅವರು ಇಂದು ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಪ್ರಸ್ತುತ ಪರಿಷ್ಕರಣೆ ಅವಧಿಯಲ್ಲಿ ಮತದಾರರ ಸೇರ್ಪಡೆ, ತಿದ್ದುಪಡಿ ಕುರಿತ ಎಲ್ಲಾ ಸಂಕ್ಷಿಪ್ತ ವಿವರಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡುವಂತೆ ತಿಳಿಸಿದ ಅವರು, ಪರಿಷ್ಕರಣೆ ಅವಧಿಯಲ್ಲಿ ಸಾರ್ವನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ, ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ಕಾಪು ವಿಧಾನಸಭಾ ಕ್ಷೇತ್ರದ ನಾಡ್ಸಾಲು ಮತ್ತು ಬಡಾ ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧ ಮತಗಟ್ಟೆ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿದ ಮತದಾರರ ಪಟ್ಟಿಯ ವೀಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದುಹಾಕುವಿಕೆ ಹಾಗೂ ತಿದ್ದುಪಡಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಡಿಸೆಂಬರ್ 23 ರಂತೆ, 4,90,062 ಪುರುಷರು, 5,26,161 ಮಹಿಳೆಯರು, 12 ತೃತೀಯ ಲಿಂಗಿಗಳು ಸೇರಿದಂತೆ 10,16,235 ಮಂದಿ ಮತದಾರರು ಇದ್ದಾರೆ.

Ashika S

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

5 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

5 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

24 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

35 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

49 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago