Categories: ಉಡುಪಿ

ಉಡುಪಿ:  ಕಳಪೆ ಕಾಮಗಾರಿಯಿಂದ ಕಿತ್ತು ಬರುತ್ತಿರುವ ರಸ್ತೆಯ ಡಾಂಬರು, ಸಾರ್ವಜನಿಕರ ಆಕ್ರೋಶ

ಉಡುಪಿ: ಬೀಡಿನಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಬರುವ ನಿರಾಶ್ರಿತರ ಪುರ್ನವಸತಿ ಕೇಂದ್ರದ ಬಳಿಯ ತಿರುವು ರಸ್ತೆಯಲ್ಲಿ ಹೊಂಡ ಗುಂಡಿಗಳಿಗೆ ತೇಪೆ ಹಾಕಿದ್ದು, ಕಾಮಗಾರಿ ನಡೆದ ಕೆಲವೇ ದಿನಗಳಲ್ಲಿ ರಸ್ತೆಯ ಗುಂಡಿಗಳಿಗೆ ಹಾಕಿರುವ ಡಾಂಬರ್ ಕಿತ್ತುಬರುತ್ತಿದೆ.

ಡಾಂಬರು ಮಿಶ್ರಣ ಸರಿ ಪ್ರಮಾಣದಲ್ಲಿಲ್ಲದೆ ತೇಪೆಗಳು ಎದ್ದೇಳುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ವರ್ಷಗಳಿಂದ ನಿರಾಶ್ರಿತರ ಪುರ್ವಸತಿ ಕೇಂದ್ರದ ಬಳಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿಲೇ ಇರುತ್ತದೆ. ಹಾಕಿದ ತೇಪೆ ಕಳಪೆ ಕಾಮಗಾರಿಯಿಂದಾಗಿ ಒಂದು ತಿಂಗಳು ಸರಿಯಾಗಿ ನಿಲ್ಲವುದಿಲ್ಲ. ಮತ್ತೆ ಯಥಾಪ್ರಕಾರ ಗುಂಡಿಗಳು ಸೃಷ್ಟಿಯಾಗುತ್ತಲೇ ಇರುತ್ತವೆ. ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದೆ. ನಗರಸಭೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವೇ ಸೂಕ್ತ ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago