ಉಡುಪಿ: ರಾಷ್ಟ್ರೀಯ ಹೆದ್ದಾರಿ – 66 ರ ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಓವರ್ ಪಾಸ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಆರಂಭಿಸುವ ಬಗ್ಗೆ ಇಂದು ಶಾಸಕ ಕೆ. ರಘುಪತಿ ಭಟ್ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರ ಸಭೆಯ ಸದಸ್ಯ ಗಿರೀಶ್ ಅಂಚನ್, ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೈ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರ್ ಮಹೇಶ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರು ಮತ್ತು ಗುತ್ತಿಗೆದಾರರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.