ಉಡುಪಿ

ಉಡುಪಿ ಸೀರೆ ಅಂತಾರಾಷ್ಟೀಯ ಖ್ಯಾತಿ ಆಗಲಿ- ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಉಡುಪಿಯ ಹೆಮ್ಮಯೆ ಕೈಮಗ್ಗದ ಸೀರೆ ಆದ , ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಯ ಉತ್ಪಾದನೆಯು ಅಧಿಕಗೊಂಡು, ವಿಶ್ವ ಮಾನ್ಯತೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಖಜಿನ ಪ್ರತಿಷ್ಠಾನ ಟ್ರಸ್ಟ್, ಕೈಮಗ್ಗ ಮತ್ತು ಜವಳಿ ಇಲಾಖೆ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಗ ಇವರ ಸಹಯೋಗದಲ್ಲಿ ನಡೆದ, ಉಡುಪಿ ಕೈ ಮಗ್ಗ ಸೀರೆ ನೇಯ್ಗೆ ತರಬೇತಿಯ ಉದ್ಘಾಟನೆಯನು ನೆರವೇರಿಸಿ ಮಾತನಾಡಿದರು.

ಉಡುಪಿಯ ವಿಶಿಷ್ಠ ಹಾಗೂ ಹೆಮ್ಮಯಾದ ಉಡುಪಿ ಸೀರೆಯ ಬಗ್ಗೆ ದೇಶದ ವಿತ್ತ ಸಚಿವರು ಕೂಡಾ ಅದನ್ನು ಧರಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದು ಇಂತಹ ಸೀರೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ಪಾದಿಸಿ ಎಲ್ಲಡೆ ದೊರೆಯುವಂತೆ ಮಾಡುವ ಉದ್ದೇಶದಿಂದ ಆರಂಭಿಸಿರುವ ಈ ನೇಯ್ಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇಲ್ಲಿ ತರಬೇತಿ ಪಡೆದವರು ಇನ್ನೂ ಹೆಚ್ಚು ಬದ್ದತೆಯಿಂದ ಅತ್ಯುತ್ತಮ ರೀತಿಯ ಉಡುಪಿ ಸೀರೆಗಳನ್ನು ತಯಾರಿಸುವ ಮೂಲಕ ವಿಶ್ವದಾದ್ಯಂತ ಇದನ್ನು ಪ್ರಸಿದ್ದಿಗೊಳಿಸುವಂತೆ ತಿಳಿಸಿದರು.

ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ ಮಾತನಾಡಿ, ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಗಳು ಉಡುಪಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ದೊರೆಯದೇ ಇರುವುದನ್ನು ಗಮನಿಸಿ , ಆಸಕ್ತರನ್ನು ಗುರುತಿಸಿ ಈ ತರಬೇತಿ ನೀಡುತ್ತಿದ್ದು, ಇವರಿಗೆ 6 ತಿಂಗಳ ಕಾಲ ಇವರಿಗೆ ಅಗತ್ಯ ತರಬೇತಿ ನೀಡುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಜವಳಿ ಇಲಾಖೆಯಲ್ಲಿ ಲಭ್ಯವಿರುವ ಹಲವು ಸೌಲಭ್ಯಗಳನ್ನು ದೊರಕಿಸಲಗುವುದು. ಹಾಗೂ ಇವರು ತಯಾರಿಸಿದ ಸೀರೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಒದಗಿಸಿ ಹೆಚ್ಚಿನ ಲಾಭದಾಯಕ ಚಟುವಟಿಕೆಯನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು.

ಉಡುಪಿ ಪ್ರಾಥಮಿಕ ನೇಕಾರರ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಮಾತನಾಡಿ, ಅಪೂರ್ವ ಕರಕುಶಲ ಕಲೆಯಾದ ನೇಕಾರಿಕೆಯನ್ನು ಉಳಿಸಿ, ಬೆಳಸುವುದು ಅಗತ್ಯವಿದೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರಕ್ಕೆ ಬರುವ ನಿಟ್ಟಿನಲ್ಲಿ ನೇಕಾರಿಕೆ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಹೆಚ್ಚಿನ ಲಾಭದಾಯಕ ಉದ್ಯಮವನ್ನಾಗಿಸಬೇಕು ಎಂದರು.
ಕೇAದ್ರ ಸರ್ಕಾರದ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯದ ಚೆಕ್ ಹಾಗೂ ಜವಳಿ ಇಲಾಖೆವತಿಯಿಂದ ನೀಡಲಾದ ಸವಲತ್ತುಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಜವಳಿ ಮತ್ತು ಕೈಮಗ್ಗ ಇಲಾಖೆಯ ಸಹಾಯಕ ನಿರ್ದೇಶಕ ಶಿವಶಂಕರ್, ದಕ್ಷಿಣ ಕನ್ನಡ ಪದ್ಮಶಾಲಿ ಸಂಘದ ಅಧ್ಯಕ್ಷ ರಾಮದಾಸ ಶೆಟ್ಟಿಗಾರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ್ಮಣ ಕೊಡಿಯಾಲಬೈಲು, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಾಮ ನಿರ್ದೇಶಿತ ಸದಸ್ಯ ಮಾದವ ಶೆಟ್ಟಿಗಾರ್ ಕೆರೆಕಾಡು, ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

2 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

3 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

14 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

15 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

34 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

44 mins ago