News Karnataka Kannada
Thursday, May 02 2024
ಉಡುಪಿ

ಉಡುಪಿ: ಕುಸ್ತಿಪಟುಗಳ ಹೋರಾಟಕ್ಕೆ‌ ವಿದೇಶದಿಂದ ಫಂಡಿಂಗ್ ಆಗಿದೆ – ಶೋಭಾ ಕರಂದ್ಲಾಜೆ ಆರೋಪ

Shobha Karandlaje alleges foreign funding for wrestlers' fight
Photo Credit : News Kannada

ಉಡುಪಿ: ಕುಸ್ತಿಪಟುಗಳು ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ವಿದೇಶದಿಂದ ಫಂಡಿಂಗ್ ಆಗಿದೆ. ಆ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಷಡ್ಯಂತರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದರು‌.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಅದಕ್ಕೆ ಜಾಗತಿಕ ಬೆಂಬಲ ಸಿಗುತ್ತೆ. ಕೇಂದ್ರ ಸರಕಾರದ ವಿರುದ್ಧದ ಪ್ರತಿಭಟನೆಗಳಿಗೆ ವಿದೇಶೀ ಫಂಡಿಂಗ್ ಇದ್ದೇ ಇರುತ್ತದೆ. ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ವಿದೇಶೀ ವ್ಯಕ್ತಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ದೇಶವನ್ನು ಅಸ್ಥಿರಗೊಳಿಸುವ,ಅತಂತ್ರ ಮಾಡುವ ಹುನ್ನಾರ ಇದರ ಹಿಂದೆ ಅಡಗಿದೆ. ಕುಸ್ತಿಪಟುಗಳ ಆರೋಪದ ಬಗ್ಗೆ ಆಂತರಿಕ ತನಿಖೆ ನಡೆಯುತ್ತಿದೆ. ಯಾರನ್ನೂ ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು