Categories: ಉಡುಪಿ

ಉಡುಪಿ: ಸಿದ್ದರಾಮಯ್ಯ ಎಲ್ಲರಿಗಿಂತ ದೊಡ್ಡ ಪಕ್ಷಾಂತರಿ ಎಂದ ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ತನ್ನನ್ನು ಟೀಕಿಸಿದ್ದ ಡಿಕೆಶಿ, ಸಿದ್ದರಾಮಯ್ಯನವರಿಗೆ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.

ಉಡುಪಿಯ ತಮ್ಮ ನಿವಾಸದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ. ನಾನು ಹುಟ್ಟಿನಿಂದ ಕಾಂಗ್ರೆಸ್. ಈಗ ಬಿಜೆಪಿ ಸೇರಿದ್ದೇನೆ. ಸಿದ್ದರಾಮಯ್ಯ 1978 ರಲ್ಲಿ ರೈತಸಂಘದಲ್ಲಿದ್ದರು. 1983 ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು. ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು ಎಂದು ಗುಡುಗಿದರು.

ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಪಕ್ಷಾಂತರ ಸಾಮಾನ್ಯ. ಹಾಗಿದ್ದಾರೆ ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಬರಬೇಡಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಘೋಷಿಸಲಿ ಎಂದು ಸವಾಲು ಹಾಕಿದರು.

ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದೆ‌, ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಟ್ಟ ಮಾತನಾಡಲು ಎಲ್ಲರಿಗೂ ಬರುತ್ತದೆ. ಆದರೆ, ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ ಎಂದು ಕುಟುಕಿದರು.

ಉಡುಪಿ ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಜೆಡಿಎಸ್ ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ. ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ. ಅದನ್ನು ಖಂಡಿಸುತ್ತೇನೆ. ಜೆಡಿಎಸ್ ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ನಿಂದ ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ. ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ತಿರುಗೇಟು ನೀಡಿದರು.

ಉಡುಪಿಯಲ್ಲಿ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಹೇಳಿಕೆ

Ashika S

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

6 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

6 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

7 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

7 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

8 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

8 hours ago