ಉಡುಪಿ

ಉಡುಪಿ: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ- ಎಸ್ಪಿ

ಉಡುಪಿ: ಹೊಸ ವರ್ಷಾಚರಣೆಯ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚುವರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಿಸಿ, ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.

ಡಿ.31ರ ಮಧ್ಯರಾತ್ರಿ 1 ಗಂಟೆಯೊಳಗೆ ಎಲ್ಲಾ ರೀತಿಯ ಹೊಸ ವರ್ಷಾಚರಣೆಯ ಕಾರ್ಯಕ್ರಮ ಮುಕ್ತಾಯವಾಗಬೇಕು. ಪಬ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮುಂತಾದ ಕಡೆಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಇರದಂತೆ ನೋಡಿಕೊಳ್ಳಬೇಕು. ಹೋಟೆಲ್ /ಪಬ್/ರೆಸ್ಟೊರೆಂಟ್, ಹೋಮ್‌ಸ್ಟೇ/ಪಿಜಿಗಳಲ್ಲಿ ಸಾರ್ವಜನಿರಿಗೆ ಈವೆಂಟ್ಸ್ ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಬಸ್ ಸ್ಟಾಂಡ್, ಸಮುದ್ರ ತೀರ, ರಸ್ತೆ, ಫುಟ್ ಪಾತ್, ಗಾರ್ಡನ್ ಮತ್ತು ಇತರೇ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮದ್ಯದ ನಶೆಯಲ್ಲಿ ಆಚರಣೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು. ಅಲ್ಲದೆ, ರಾತ್ರಿ ಹೊತ್ತು ಕುಡಿದು ವಾಹನ ಚಾಲನೆ ಮತ್ತು ಅತೀವೇಗ/ನಿರ್ಲಕ್ಷ್ಯತನದ ವಾಹನ ಚಾಲನೆ ನಡೆಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

25 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

41 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago