ಉಡುಪಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ನಿಖಿತಾ ಎಂಬ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.
ನಿಖಿತ ಸಾವಿನ ಪ್ರಕರಣ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ವೈದ್ಯರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ನಿಖಿತಾಳ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕು. ಈ ಪ್ರಕರಣದಲ್ಲಿ ಆಸ್ಪತ್ರೆಯ ನಡೆ ಸಂಶಯಾಸ್ಪದವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಆ ಬಳಿಕ ಎಎಸ್ಪಿ ಮೂಲಕ ಎಸ್ಪಿಗೆ ಮನವಿ ಸಲ್ಲಿಸಲಾಯಿತು.