Categories: ಉಡುಪಿ

ಉಡುಪಿ: ಇದು ರಾಜಸ್ವ ಹೆಚ್ಚಳದ ಅಮೃತ ಕಾಲದ ಬಜೆಟ್- ಸಚಿವ ಸುನಿಲ್ ಕುಮಾರ್

ಉಡುಪಿ: ಕೋವಿಡ್ ನಂತರದ ದಿನಗಳಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಸುಸ್ಥಿತಿಯಲ್ಲಿ ಹಿಡಿದಿಡುವ ಮೂಲಕ ಸುಮಾರು 402 ಕೋಟಿ ರೂ. ರಾಜಸ್ವ ಹೆಚ್ಚಳದ ಬಜೆಟ್ ಮಂಡನೆ ಮಾಡುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಆಯವ್ಯಯ ಮಂಡಿಸಿದ್ದಾರೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.

ರಾಜಸ್ವ ವೆಚ್ಚ, ಬಂಡವಾಳ ವೆಚ್ಚ ಹಾಗೂ ಸಾಲ ಮರುಪಾವತಿ ಸೇರಿದಂತೆ 3,09,182 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ವಿತ್ತೀಯ ಹೊಣೆಗಾರಿಕೆ ಮಿತಿಯಲ್ಲೇ ರಾಜಸ್ವ ಹೆಚ್ಚಳದ ಬಜೆಟ್ ಮಂಡನೆ ಮೂಲಕ ಬೊಮ್ಮಾಯಿ ಸೈ ಎನಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ರೈತ ಸಮುದಾಯಕ್ಕೆ ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕೊಡುಗೆ ನೀಡಲಾಗಿದೆ. ಸಹಕಾರ ಬ್ಯಾಂಕ್ ಗಳ ಮೂಲಕ ನೀಡಲಾಗುತ್ತಿದ್ದ ಶೂನ್ಯ ಬಡ್ಡಿ ಸಾಲ‌ ಪ್ರಮಾಣವನ್ನು 3ರಿಂದ 5 ಲಕ್ಷ ರೂಗೆ ಹೆಚ್ಚಳ‌ಮಾಡಲಾಗಿದೆ. 30 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಲಿದೆ. 56 ಲಕ್ಷ ಸಣ್ಣ ಹಾಗೂ ಅತಿಸಣ್ಣ ರೈತ ಕುಟುಂಬಗಳಿಗೆ ವಿಮಾ ಯೋಜನೆ ಕಲ್ಪಿಸಿರುವುದು ಶ್ಲಾಘನೀಯ.
ಸ್ತ್ರೀಯರ ಸಬಲೀಕರಣಕ್ಕಾಗಿ ಒಂದು ಲಕ್ಷ ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಕಾರ್ಮಿಕರಿಗೆ 500ರೂ. ಸಹಾಯ ಧನ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸಣ್ಣ ಮತ್ತು ಅತಿ ಸಣ್ಣ ಕುಟುಂಬಗಳಿಗೆ ಜೀವನ್ ಜ್ಯೋತಿ ವಿಮಾ ಯೋಜನೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಸೇರಿದಂತೆ ಜನ ಸಾಮಾನ್ಯರಿಗೆ ಹೊರೆಯಾಗದಂತೆ ಮುಖ್ಯಮಂತ್ರಿಗಳು ಯೋಜನೆ ರೂಪಿಸಿದ್ದಾರೆ.

ಇಂಧನ‌ ಕ್ಷೇತ್ರದ ಸುಧಾರಣೆಗಾಗಿ ಗುರುಚರಣ್ ಸಮಿತಿ ವರದಿ ಅನುಷ್ಢಾನದ ಬಗ್ಗೆ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ಇಂಧನ ಕಂಪನಿಗಳಿಗೆವ ೧೩,೭೪೩ ಕೋಟಿ ರೂ.ಅನುದಾನ ನೀಡುವ ಭರವಸೆ ನೀಡಲಾಗಿರುವುದು ಶ್ಲಾಘನೀಯ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಬೊಮ್ಮಾಯಿ‌ ಉದಾರ ಹೃದಯ ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ.

ಮೀನುಗಾರರಿಗೆ ವಸತಿ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಹತ್ತು ಸಾವಿರ ವಸತಿ ರಹಿತ ಮೀನುಗಾರರಿಗೆ ಸೂರು ಕಲ್ಪಿಸಲಾಗುತ್ತದೆ. ಮೀನುಗಾರಿಕಾ ದೋಣಿಗಳಿಗೆ ೨ ಲಕ್ಷ ಕಿ ಲೀಟರ್ ಡೀಸೆಲ್ ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸರ್ಕಾರ ೨೫೦ ಕೋಟಿ ರೂ. ವಿನಿಯೋಗಿಸಲಿದೆ. ಸೀಗಡಿ ರಫ್ತು ಪ್ರೋತ್ಸಾಹಿಸಲು ಸೀಗಡಿ ಕೃಷಿ ಕ್ಕಸ್ಟರ್ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ.

ಪಶ್ಚಿಮವಾಹಿನಿ ಎರಡನೇ ಹಂತದಲ್ಲಿ ೩೭೮ ಕೋಟಿ ರೂ. ಮೊತ್ತದ ಕಾಮಗಾರಿ ಅನುಷ್ಠಾನಕ್ಕೆ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ಆಳಸಮುದ್ರ ಮೀನುಗಾರಿಕೆಯನ್ನು ಉತ್ತೇಜಿಸಲು ೧೦೦ ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಮತ್ಸ್ಯ ಸಿರಿ ಯೋಜನೆ ಸಂಯೋಜನೆ ಮಾಡಲು ಮುಂದಾಗಿರುವ ಮೂಲಕ ಮತ್ಸ್ಯೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಒಟ್ಟಾರೆಯಾಗಿ ಇದು ಎಲ್ಲರನ್ನು ಒಳಗೊಳ್ಳುವ ಅಮೃತ ಕಾಲದ ಬಜೆಟ್ ಎಂದು ಬಣ್ಣಿಸಿದ್ದಾರೆ.

Gayathri SG

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

33 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

57 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago