ಉಡುಪಿ: ತುಳುಕೂಟ ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದಿ. ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥವಾಗಿ ತುಳು ಭಾವಗೀತೆ ಗಾಯನ ಕಾರ್ಯಕ್ರಮ ಇದೇ ಜ.8ರಂದು ನಗರದ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ಪ್ರಕಾಶ್ ಸುವರ್ಣ ಕಟಪಾಡಿ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.