News Karnataka Kannada
Sunday, May 12 2024
ಉಡುಪಿ

ಉಡುಪಿ ವಿಡಿಯೋ ಪ್ರಕರಣ: ಸಿಐಡಿಗೆ ಹಸ್ತಾಂತರಿಸಲು ಆದೇಶ

Cleaning staff arrested for shooting video of girl students in washroom
Photo Credit : News Kannada

ಉಡುಪಿ: ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣ ಇದಾಗಿದ್ದು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದರು ಎಂದು ಆರೋಪಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಘಟನೆ ಜುಲೈ 18 ರಂದು ನಡೆದಿದ್ದು ಜುಲೈ 26ರಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ, ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಸರಕಾರವನ್ನು ಆಗ್ರಹಿಸಿದ್ದರು.

ಈ ಬಗ್ಗೆ ಕರಾವಳಿಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಕೂಡ ಮನವಿ ಮಾಡಿದ್ದರು. ಈ ನಡುವೆ ರಾಜ್ಯ ಸರಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು