Categories: ಉಡುಪಿ

ಉಡುಪಿ: ಅನಾರೋಗ್ಯದಿಂದ ಕಾರ್ಮಿಕ ಸಾವು, ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ವಿಶು ಶೆಟ್ಟಿ

ಉಡುಪಿ: ಹೊಟ್ಟೆಪಾಡಿಗಾಗಿ ಮೀನುಗಾರಿಕಾ ಉದ್ಯೋಗವನ್ನು ಅರಿಸಿಕೊಂಡು ಮಲ್ಪೆಗೆ ಬಂದಿದ್ದ ಗುಜರಾತ್ ಮೂಲದ ಬಲವಂತ್‌ ಭಾಯ್ ತಾಂಡೇಲಾ ಎಂಬವರು ಅನಾರೋಗ್ಯಕ್ಕೀಡಾಗಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆ ನಡೆಸಲು ಸಂಬಂಧಿಕರು ಅಸಹಾಯಕರಾದ ಹಿನ್ನೆಲೆಯಲ್ಲಿ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಸಂಬಂಧಿಕರ ಉಪಸ್ಥಿತಿಯಲ್ಲಿ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಬಲವಂತ್ ಭಾಯ್ ನನ್ನು‌ ವಿಶು ಶೆಟ್ಟಿ ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಬಳಿಕ‌ ಸಂಬಂಧಿಕರನ್ನು ಪತ್ತೆಹಚ್ಚಿ ಮಾಹಿತಿ ನೀಡಿದ್ದರು. ಆದರೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದರು. ಆ ನಂತರ ವಿಶು ಶೆಟ್ಟಿ ಅವರೇ ಸಂಬಂಧಿಕರನ್ನು ಮಲ್ಪೆ ಠಾಣೆ ಹಾಗೂ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಕಾನೂನು ಪ್ರಕ್ರಿಯೆ ನಡೆಸಿದರು. ಶವದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ದೇಹವನ್ನು ಗುಜರಾತಿಗೆ ಕೊಂಡೊಯ್ಯಲು ಸಂಬಂಧಿಕರು ಅಸಹಾಯಕತೆ ವ್ಯಕ್ತಪಡಿಸಿದಾಗ, ವಿಶು ಶೆಟ್ಟಿ ಅವರೇ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಿದರು.

ವಿಷಯ ತಿಳಿದ ಮಲ್ಪೆಯ ಮಹಿಳೆಯೋರ್ವರು ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಿ ಕುಟುಂಬದ ಕಣ್ಣೀರು ಒರೆಸುವ ಪ್ರಯತ್ನ ಮಾಡಿದ್ದಾರೆ. ಮಲ್ಪೆ ಠಾಣಾ ಎಎಸ್‌ಐ ತನಿಯ, ಸಾಮಾಜಿಕ ಕಾರ್ಯಕರ್ತ ರಾಮದಾಸ್ ಪಾಲನ್ ಉದ್ಯಾವರ ಹಾಗೂ ಕಾಡಬೆಟ್ಟು ಹುಸೇನ್ ಸಹಕರಿಸಿದರು.

Ashika S

Recent Posts

ಎಮ್.ಎಲ್.ಸಿ ಟಿಕೆಟ್ ಹಂಚಿಕೆ ಬಿಜೆಪಿಯಲ್ಲಿ ಬಂಡಾಯದ ಬಿಸಿ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ‌ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಪಂ‌ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಸುರೇಶ ಸಜ್ಜನ್ ಟಿಕೆದ…

3 mins ago

ಎನ್‌ಸಿಪಿ ರದ್ದತಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಬಿವಿಪಿ ಪ್ರತಿಭಟನೆ

ರಾಜ್ಯ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು ಎಂದು ಒತ್ತಾಯಿಸಿ ಅಖಿಲ ಭಾರತೀಯ…

5 mins ago

ವರುಣನ ಆರ್ಭಟ : ಮಲೆ ಮಹದೇಶ್ವರ ಬೆಟ್ಟದ ಮಜ್ಜನ ಬಾವಿಯೇ ಮುಳುಗಡೆ, ನೀರು ಕಲುಷಿತ..!

ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ, ಮಳೆಗಾಲದಲ್ಲಿ ಜೋರು ಮಳೆ ಬಂದರೆ ಪ್ರತಿ ಬಾರಿಯೂ…

15 mins ago

ಲಖನೌ ವಿರುದ್ಧದ ಪಂದ್ಯದ ಬಳಿಕ​ ಶಾಕಿಂಗ್​ ಹೇಳಿಕೆ ಕೊಟ್ಟ ರಿಷಭ್​

ಅರುಣ್​ ಜೇಟ್ಲಿ ಕ್ರೀಡಾಂಗನದಲ್ಲಿ ನಡೆದ 17ನೇ ಆವೃತ್ತಿಯ 64ನೇ ಐಪಿಎಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು…

19 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

31 mins ago

ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ಭಾರತೀಯ ಮೂಲದ 66ವರ್ಷದ ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ವಾಯುವ್ಯ ಲಂಡನ್‌ ನ ಬಸ್‌ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ…

31 mins ago