News Karnataka Kannada
Friday, May 03 2024
ಉಡುಪಿ

ಉದ್ಯಾವರ: ತಾಪಂ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

Former TP member Bhaskar Kotian passes away
Photo Credit : News Kannada

ಉದ್ಯಾವರ: ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ ಅವರು ಹೃದಯಾಘಾತದಿಂದ ನಿಧನ ಹೊಂದಿದರು.
ಅವರಿಗೆ 67ವರ್ಷ ವಯಸ್ಸಾಗಿತ್ತು.

ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಉದ್ಯಾವರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ಫಿಶ್ ಮಿಲ್ ವಿರೋಧಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್ಸಿನಲ್ಲಿ ಸಕ್ರಿಯವರಾಗಿದ್ದರು. ಮೃತರು ಪತ್ನಿ, ಮಗಳು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು