Categories: ಉಡುಪಿ

ಉಳ್ಳಾಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಚಾಲಕನಿಗೆ ಗಾಯ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ  ರಾ.ಹೆ66 ರ ಕೋಟೆಕಾರು ಬೀರಿ ಸಮೀಪ ನಿನ್ನೆ ತಡರಾತ್ರಿ ವೇಳೆ ನಡೆದಿದೆ.

ಸ್ಥಳೀಯ ಯುವಕರ ತಂಡ ತಕ್ಷಣ ಕಾರು ಚಾಲಕನನ್ನು ಹೊರಗೆಳೆದು ರಕ್ಷಿಸಿ ಮಾನವೀಯತೆ ಮೆರೆದಿರುವ ವೀಡಿಯೋ ವೈರಲ್ ಆಗಿದೆ.

ಹಳೆಯಂಗಡಿ ನಿವಾಸಿ ನೌಫಾಲ್ ಗಾಯಗೊಂಡವರು. ತಲಪಾಡಿ ಕಡೆಯಿಂದ ಹಳೆಯಂಗಡಿಯತ್ತ ತೆರಳುವ ವೇಳೆ ಕಾರು ನಿಯಂತ್ರಣ ಕಳೆದು ರಾ.ಹೆ. ಬಳಿಯ ವಿಭಜಕ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿ ಹೊಡೆದು, ಚಾಲಕ ಅದರೊಳಕ್ಕೆ ಸಿಲುಕಿದ್ದರು. ತಕ್ಷಣ ಸ್ಥಳೀಯ ಯುವಕರ ತಂಡ ಸ್ಥಳಕ್ಕೆ ದೌಡಾಯಿಸಿ ಕಾರೊಳಗಡೆ ಸಿಲುಕಿದ್ದ ನೌಫಾಲ್ ನನ್ನು ಹೊರಗೆಳೆದು ಬೇರೆ ಕಾರಿನ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ವೀಡಿಯೋ ವೈರಲ್ ಆಗಿದ್ದು, ಯುವಕರ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ashika S

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

24 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

33 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

34 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

55 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago