News Karnataka Kannada
Saturday, May 04 2024
ಉಡುಪಿ

ಉಪ್ಪೂರು: 55 ಕುಟುಂಬಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

Uppur: 55 families issued permanent site title deeds
Photo Credit : News Kannada

ಬ್ರಹ್ಮಾವರ: ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 55 ಕುಟುಂಬಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಕೆ. ರಘುಪತಿ ಭಟ್ ಅವರು ಉಪ್ಪೂರು ಗ್ರಾಮದ ಗೆಳೆಯರ ಬಳಗದ ವಠಾರದಲ್ಲಿ ಇಂದು ವಿತರಿಸಿದರು.

ಉಪ್ಪೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ ಈ ಕುಟುಂಬಗಳಿಗೆ ಗೋಮಾಳದ ಸಮಸ್ಯೆಯಿಂದಾಗಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿತ್ತು. ವಿಶೇಷ ಪ್ರಕರಣಗಳ ಅಡಿ ಗೋಮಾಳವನ್ನು ವಿರಹಿತಗೊಳಿಸಿ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಜು ಪೂಜಾರಿ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಾಧಿಕಾರಿಗಳಾದ ಚಂದ್ರ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು