Categories: ಉಡುಪಿ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನೀರಿನ ಅಭಾವ: ಸಂಕಷ್ಟದಲ್ಲಿ ರೋಗಿಗಳು

ಉಡುಪಿ: ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ನೀರಿನ ಅಭಾವ ಜಿಲ್ಲಾಸ್ಪತ್ರೆಯ ರೋಗಿಗಳಿಗೂ ತಟ್ಟಿದೆ.

ಉಡುಪಿಗೆ ನೀರುಣಿಸುತ್ತಿರುವ ಸ್ವರ್ಣಾ ನದಿ ನೀರು ಬಹುತೇಕ ತಳಮಟ್ಟ ತಲುಪಿದೆ. ಹೀಗಾಗಿ, ನಗರಸಭೆ ನೀರು ಅವಲಂಬಿಸಿದ ಜನರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ನಗರಸಭೆ ನೀರು ಪೂರೈಕೆಯಾಗುತ್ತಿತ್ತು. ಜೊತೆಗೆ ಬಾವಿಯ ನೀರು ಸಾಕಾಗುತ್ತಿತ್ತು. ಆದರೆ ಏಪ್ರಿಲ್ ಆರಂಭದಲ್ಲೇ ಬಾವಿ ನೀರು ಬತ್ತಿದ್ದು, ಇದರಿಂದ ನೀರಿನ ಅಭಾವ ಉಂಟಾಗಿದೆ.

ಜಿಲ್ಲಾಸ್ಪತ್ರೆ ಮತ್ತು ಅದರ ಅಧೀನದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ನಿತ್ಯ 8 ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಇದು ಸಾಕಾಗದೆ ಇರುವುದರಿಂದ ಈ ಹಿಂದಿನಂತೆ ರೋಗಿಗಳಿಗೆ 24 ತಾಸು ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಇವತ್ತು ಜಿಲ್ಲಾಧಿಕಾರಿ ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ನೀರಿನ ವ್ಯವಸ್ಥೆ ಮಾಡಿಕೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Ashika S

Recent Posts

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

4 mins ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ…

12 mins ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

25 mins ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

44 mins ago

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…

49 mins ago

ನಿಯಂತ್ರಣ ಕಳೆದುಕೊಂಡ ‘ಅಮಿತ್ ಶಾ’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…

57 mins ago