ಉಡುಪಿ: ಸ್ಪೀಕರ್ ಸ್ಥಾನ ಸಾಂವಿಧಾನಿಕ ಹುದ್ದೆ. ಅದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ. ಆ ಹುದ್ದೆಗೆ ಸಿಗುವ ಗೌರವ ಜಾಮಿಯ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದರು.
ಮುಸ್ಲಿಮರಿಗೆ ಕಾಂಗ್ರೆಸ್ ಪ್ರಧಾನ್ಯತೆ ಜಮೀರ್ ಅಹ್ಮದ್ ಭಾಷಣ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಸ್ಪೀಕರ್ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆ ಆಗೋದು. ಖಾದರ್ ಅವರ ಘನತೆಯನ್ನು ಹಾಳು ಮಾಡಬೇಡಿ ಎಂದರು.