News Karnataka Kannada
Tuesday, April 30 2024
ಉಡುಪಿ

ಕಟಪಾಡಿ ಪೇಟೆಯ ವ್ಯಾಪ್ತಿಯಲ್ಲಿ ನೆಟ್ ವರ್ಕ್ ಇಲ್ಲದೆ ಜನರ ಪರದಾಟ

ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದು ಒಂದು ತಿಂಗಳಿನಿಂದ ಮೊಬೈಲ್ ನೆಟ್ ವರ್ಕ್ ಸಂಪೂರ್ಣ ಸ್ಥಗಿತಗೊಂಡಿದ್ದು, ಇದರಿಂದ ಮೊಬೈಲ್ ಹಾಗೂ ಇಂಟರ್ ನೆಟ್ ಬಳಕೆದಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
Photo Credit :

ಉಡುಪಿ: ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದು ಒಂದು ತಿಂಗಳಿನಿಂದ ಮೊಬೈಲ್ ನೆಟ್ ವರ್ಕ್ ಸಂಪೂರ್ಣ ಸ್ಥಗಿತಗೊಂಡಿದ್ದು, ಇದರಿಂದ ಮೊಬೈಲ್ ಹಾಗೂ ಇಂಟರ್ ನೆಟ್ ಬಳಕೆದಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ನೆಟ್ ವರ್ಕ್ ಸಿಗದೆ ಹೈರಾಣಾಗಿರುವ ಸ್ಥಳೀಯರು ಮೊಬೈಲ್ ಸೇವೆ ಕಲ್ಪಿಸುವ ಸಂಸ್ಥೆಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೊಬೈಲ್ ಕಂಪನಿ ಹಾಗೂ ಟವರ್ ಅಳವಡಿಸಲಾಗಿರುವ ಜಾಗದ ಮಾಲೀಕರ ನಡುವಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ಏರ್‌ಟೆಲ್, ವಿಐ ಮತ್ತು ಜಿಯೋ ಬಳಕೆದಾರರಿಗೆ ನೆಟ್ ವರ್ಕ್ ಸಮಸ್ಯೆ ಉಂಟಾಗಿದೆ. ಅಲ್ಲದೆ, ಫೋನ್ ಕರೆ ಮಾಡಲು, ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ, ಆನ್‌ಲೈನ್ ಹಣಕಾಸಿನ ವ್ಯವಹಾರ, ವರ್ಕ್ ಫ್ರಮ್ ಹೋಮ್, ಕಚೇರಿಯ ದೈನಂದಿನ ಕೆಲಸ ನಿರ್ವಹಿಸಲು ಕಷ್ಟಪಡುವಂತಾಗಿದೆ.

ಟವರ್ ಲಭ್ಯವಿಲ್ಲದೆ ನಾವೇನೂ ಮಾಡಲಾಗುತ್ತಿಲ್ಲ. ಸಮೀಪದಲ್ಲಿ ಪರ್ಯಾಯ ಜಾಗವೂ ಸಿಗುತ್ತಿಲ್ಲ ಎಂದು ಮೊಬೈಲ್ ಸೇವೆ ಒದಗಿಸುವ ಕಂಪನಿಗಳು ಅಳಲು ತೋಡಿಕೊಂಡಿದ್ದಾರೆ.
ಜಾಗದ ಮಾಲೀಕರು ಮತ್ತು ನೆಟ್ವರ್ಕ್ ಸಂಸ್ಥೆಗಳು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು