Categories: ಉಡುಪಿ

ಬಿಜೆಪಿ ಮೇಲೆ ಮಹಿಳೆಯರಿಗೆ ಅಪಾರವಾದ ನಂಬಿಕೆ ಇದೆ – ನಟಿ ತಾರಾ

ಕುಂದಾಪುರ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಜನರನ್ನು ಮರಳು ಮಾಡುವ ಕಾರ್ಡ್ ಆಗಿದ್ದು, ಅದನ್ನು ನಂಬಬೇಡಿ. ಬಿಜೆಪಿ ಕಳೆದ ಅವಧಿಯಲ್ಲಿ ರಾಜ್ಯ ಹಾಗೂ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ರಿಪೋರ್ಟ್ ಕಾರ್ಡನ್ನು ನೋಡಿ ಯಾರು ಉತ್ತಮರು ಎನ್ನುವುದಾಗಿ ಯೋಚಿಸಿ ಮತ ನೀಡಿ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು.

ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ನಡೆದ ಮಹಿಳಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಸ್ಟಾರ್ ಪ್ರಚಾರಕಿ ನಟಿ ತಾರಾ ಮಾತನಾಡಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡ ಅಪಾರ ಸಂಖ್ಯೆಯ ತಾಯಂದಿರು, ಅಕ್ಕ- ತಂಗಿಯರನ್ನು ಕಂಡಾಗ ಬಿಜೆಪಿ ಬಗ್ಗೆ ಬೈಂದೂರಿನ ಮಹಿಳೆಯರಿಗೆ ಅಪಾರ ನಂಬಿಕೆಯಿರುವುದು ಖಾತ್ರಿ ಆಗಿದೆ. ಮುಂಬರುವ ಚುನಾವಣೆಯಲ್ಲಿ ಬೈಂದೂರಲ್ಲಿ ಗುರುರಾಜ್ ಗಂಟಿಹೊಳೆ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುರುರಾಜ್ ಗಂಟಿಹೊಳೆ, ಪ್ರಮೋದ್ ಮಧ್ವರಾಜ್, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿ, ಉಸ್ತುವಾರಿ ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ದೀಪಕ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಬೈಂದೂರು ಅಧ್ಯಕ್ಷೆ ಭಾಗೀರಥಿ ಸುರೇಶ್, ಪ್ರಮುಖರಾದ ದೀಪಾ, ಶೋಭಾ ಜಿ.ಪುತ್ರನ್ ಮತ್ತಿತರರು ಉಪಸ್ಥಿತರಿದ್ದರು. ಪ್ರಿಯದರ್ಶಿನಿ, ಅನಿತಾ ನಿರೂಪಿಸಿದರು.

Sneha Gowda

Recent Posts

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ : ವಿಡಿಯೋ ವೈರಲ್‌

ಕಜಕೀಸ್ತಾನದ  ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.

14 mins ago

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ…

20 mins ago

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

44 mins ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

50 mins ago

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ…

58 mins ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ…

1 hour ago