Categories: ಉಡುಪಿ

ಮಣಿಪಾಲ ಕೆಎಂಸಿಯಲ್ಲಿ ನೇತ್ರ ಸಂಬಂಧಿತ ಕಾಯಿಲೆಗಳ ಕುರಿತ ಕಾರ್ಯಾಗಾರಕ್ಕೆ ಚಾಲನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನೇತ್ರ ಸಂಬಂಧಿತ ಕಾಯಿಲೆಗಳ ಹಾಗೂ ಅಂಧತ್ವ ನಿಯಂತ್ರಣದ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಮಾಹೆ ಮಣಿಪಾಲದ ಇಂಟರಾಕ್ಟ್ ಸಭಾಂಗಣದಲ್ಲಿ ನಡೆದ ಈ ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ನಾಗಭೂಷಣ ಉಡುಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ನೇತ್ರಪ್ರಧಾನ ಕಾರ್ಯಕ್ರಮದ ಅಂಗವಾಗಿ ಈ ಕಾರ್ಯಕ್ರಮವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಹಯೋಗದೊಂದಿಗೆ ನಡೆಸುತ್ತಿದ್ದೇವೆ. ಈ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು, ಇದರ ಮೂಲಕ ಹುಟ್ಟಿದ ಮಗುವಿನೊಂದಿಗೆ ಎಲ್ಲರೂ ಅಂಧತ್ವದಿಂದ ಮುಕ್ತರಾಗಬೇಕು ಎಂದು ಆಶಿಸಿದರು. ಇದಕ್ಕೆ ಸಹಕರಿಸುತ್ತಿರುವ ಕಸ್ತೂರ್ಬಾ ಆಸ್ಪತ್ರೆಗೆ ಅಭಿನಂದೆನೆಗಳನ್ನು ಸಲ್ಲಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆ ಎಂ ಸಿ ಡೀನ್ ಡಾ ಪದ್ಮರಾಜ್ ಹೆಗ್ಡೆ ಅವರು, ಈಗ ನಾವು ಕಂಪ್ಯೂಟರ್ ಮತ್ತು ತಂತ್ರಜ್ಞಾನ ಕಾಲದಲ್ಲಿ ಇದ್ದೇವೆ. ಸಣ್ಣ ಮಕ್ಕಳಿಂದ ಎಲ್ಲರೂ ಮೊಬೈಲ್ ಮತ್ತು ದೂರದರ್ಶನದಿಂದ ಕಣ್ಣಿನ ಸಮಸ್ಯೆಗೆ ಒಳಪಡುತ್ತಿದ್ದಾರೆ . ಅದಕ್ಕೆ ಸೂಕ್ತ ಸಮಯದಲ್ಲಿ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು. ಇನ್ನು ಮುಂದೆಯೂ ಜಿಲ್ಲಾ ಅರೋಗ್ಯ ಇಲಾಖೆಯ ಯಾವುದೇ ಕಾರ್ಯಕ್ರಮಕ್ಕೆ ನಾವು ಸಹಕರಿಸಲಿದ್ದೇವೆ ಎಂದು ಹೇಳಿದರು.

ಜಿಲ್ಲಾ ಅಂದತ್ವ ನಿಯಂತ್ರಣ ಅಧಿಕಾರಿ ಡಾ ಲತಾ ನಾಯಕ್ ಈ ತರಬೇತಿ ಕಾರ್ಯಕ್ರಮದಿಂದ ನೇತ್ರಕ್ಕೆ ಸಂಬಂದಿಸಿದ ಎಲ್ಲಾ ಕಾಯಿಲೆಗಳನ್ನು ಹಳ್ಳಿ ಹಳ್ಳಿಗಳಲ್ಲಿ ಪತ್ತೆಹಚ್ಚಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗಲು ಸಹಕಾರಿಯಾಗಲಿದೆ ಎಂದರು

ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಅತಿಥಿಗಳಿಗೆ ನೆನಪಿನ ಕಾಣಿಕೆಗಳನ್ನು ಹಸ್ತಾಂತರಿಸಿದರು. ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ ಅಶ್ವಿನಿ ಕುಮಾರ್ ಗೋಪಾಡಿ ಸ್ವಾಗತಿಸಿ , ನೇತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಯೋಗೀಶ್ ಕಾಮತ್ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ.ನೀತಾ ಕೆ.ಐ.ಆರ್, ಸಹ ಪ್ರಾಧ್ಯಾಪಕಿ, ಡಾ.ಸುಶನ ಶೆಟ್ಟಿ, ಸಹಾಯಕ ಪ್ರಾಧ್ಯಾಪಕಿ ಮತ್ತು ಡಾ.ರಶ್ಮಿ ಕೆ ಸಹ ಪ್ರಾಧ್ಯಾಪಕಿ ಭಾಗವಿಸಿದ್ದರು.

ಉಡುಪಿ ಜೆಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 250 ಸಮುದಾಯ ಆರೋಗ್ಯ ಅಧಿಕಾರಿಗಳು ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಂಡರು. ಡಾ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

Sneha Gowda

Recent Posts

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

7 mins ago

ಅಸ್ಸಾಂ, ಗೋವಾದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಏತನ್ಮಧ್ಯೆ, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಕೆಲವು ರಾಜ್ಯಗಳು ಮತ್ತು…

27 mins ago

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

56 mins ago

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

1 hour ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

2 hours ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

2 hours ago