News Karnataka Kannada
Friday, May 03 2024
ಉಡುಪಿ

ಡಾ. ಪುಂಡಿಕೈ ಗಣಪಯ್ಯ ಭಟ್ ಗೆ ಪೊಳಲಿ ಶೀನಪ್ಪ ಹೆಗ್ಗಡೆ, ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ

Writer Dr. Polali Sheenappa Heggade and SR Hegde presented awards to Pundikai Ganapayya Bhat
Photo Credit : News Kannada

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಸಾಹಿತಿ ಡಾ. ಪುಂಡಿಕೈ ಗಣಪಯ್ಯ ಭಟ್ ಅವರಿಗೆ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ  ಮಾಡಲಾಯಿತು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ, ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಯುನಿರ್ವಸಲ್ ಪ್ರೆಸ್ ಮುಖ್ಯ ಸಂಪಾದಕಿ ಪ್ರೊ. ನೀತಾ ಇನಾಂದಾರ್, ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣು ಭಟ್ಟ, ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಂಶುಪಾಲ ಡಾ. ಸುರೇಶ್‌ ರೈ, ಲೇಖಕಿ ಆತ್ರಾಡಿ ಅಮೃತಾ ಶೆಟ್ಟಿ ಉಪಸ್ಥಿತರಿದ್ದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಚೇಳ್ಯಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಇಂದಿರಾ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು‌. ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು