ಉಡುಪಿ

ಮಲ್ಪೆ ಔಟರ್ ಹಾರ್ಬರ್ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಮೀನುಗಾರಿಕೆಗೆ ಸಂಬಂಧಿಸಿದ ವಿವಿಧ ಬೇಡಿಕೆ ಸಹಿತ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಲ್ಲಿಸಿರುವ ವಿವಿಧ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರದ ಮೂಲಕ ಶೀಘ್ರ ಅನುಮೋದನೆ ನೀಡುವಲ್ಲಿ ವಿಶೇಷ ಮುತುವರ್ಜಿ ವಹಿಸುವಂತೆ ರಾಜ್ಯ ಮೀನುಗಾರಿಕೆ ಸಚಿವರಾದ ಮಾಂಕಾಳ ವೈದ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮನವಿ ಮಾಡಿದರು.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕೆ ಬೋಟ್ ಗಳ ಸಂಖ್ಯೆ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಂದರಿನಲ್ಲಿ ಸುಗಮ ಚಟುವಟಿಕೆಗೆ ಜಾಗದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಲ್ಪೆ ಪಡುಕೆರೆಯಲ್ಲಿ ಸುಮಾರು 6 ಸಾವಿರ ಬೋಟ್ ನಿಲುಗಡೆ ಸಾಮರ್ಥ್ಯದ ಔಟರ್ ಹಾರ್ಬರ್ ನಿರ್ಮಾಣ ಹಾಗೂ ಪಡುಕೆರೆ ಸೇತುವೆ ಬಳಿ 500 ಮೀಟರ್ ಜೆಟ್ಟಿ ಹಾಗೂ 100 ಮೀಟರ್ ನಾಡದೋಣಿ ತಂಗುದಾಣದ ಪ್ರಸ್ತಾವನೆಗೆ ಶೀಘ್ರ ಮಂಜೂರಾತಿ ನೀಡುವಂತೆ ಮನವಿ ಮಾಡಿದರು.

ಟೆಬ್ಮಾ ಶಿಪ್ ಯಾರ್ಡ್ ಈ ಹಿಂದೆ ನೀಡಿರುವ ಜಾಗದ ಲೀಸ್ ಅವಧಿ ಮುಗಿದ ಕೂಡಲೇ ಜಾಗವನ್ನು ಮೀನುಗಾರಿಕೆ ಇಲಾಖೆ ಹಿಂಪಡೆದು ಮೀನುಗಾರಿಕೆ ಚಟುವಟಿಕೆಗಳ ಬಳಕೆಗೆ ಅವಕಾಶ ಕಲ್ಪಿಸುವುದು, ಮಹಿಳಾ ಮೀನುಗಾರ ಶೂನ್ಯ ಬಡ್ಡಿದರ ಸಾಲ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್ ಗಳ ಮೂಲಕ ಅನುಷ್ಟಾನ, ಮೀನುಗಾರರ ಬಹುದಿನಗಳ ಬೇಡಿಕೆಗಳಾದ ಸೀ ಆಂಬ್ಯುಲೆನ್ಸ್, ಕಡಲ್ಕೊರೆತ ತಡೆಗೆ ತಡೆಗೋಡೆ ನಿರ್ಮಾಣ, ಬೋಟ್ ಮರು ನಿರ್ಮಾಣದ ಸಾಧ್ಯತಾ ಪ್ರಮಾಣ ಪತ್ರದ ಅವಧಿಯನ್ನು ಮರದ ಬೋಟಿಗೆ 5 ವರ್ಷ ಹಾಗೂ ಸ್ಟೀಲ್ ಬೋಟಿಗೆ 7 ವರ್ಷಕ್ಕೆ ಕಡಿತಗೊಳಿಸುವುದು, ಮೀನುಗಾರಿಕೆ ಬಂದರು ಪ್ರದೇಶದಲ್ಲಿ ಪ್ರತಿ ವರ್ಷ ಡ್ರೆಜಿಂಗ್ ಕಾಮಗಾರಿ, ಮೀನುಗಾರಿಕೆ ದೋಣಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಡೀಸೆಲ್ ಹಾಗೂ ಸೀಮೆ ಎಣ್ಣೆ ಪೂರೈಕೆ, ಅಂತಾರಾಜ್ಯ ಮೀನುಗಾರಿಕೆ ಸಮನ್ವಯ ಸಮಿತಿ ರಚನೆ ಮಾಡುವಂತೆ ಸಚಿವರಲ್ಲಿ ಪ್ರಸ್ತಾಪಿಸಿದರು.

ಕರಾವಳಿ ಜಿಲ್ಲೆಯ ಮೀನುಗಾರಿಕೆ ಅಭಿವೃದ್ದಿ ಹಾಗೂ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಸಂಘಟನೆಗಳ ಮುಖಂಡರೊಂದಿಗೆ ಉಡುಪಿಯಲ್ಲಿ ಸಭೆ ನಡೆಸುವಂತೆ ಸಚಿವರಿಗೆ ಶಾಸಕ ಯಶ್ ಪಾಲ್ ಸುವರ್ಣ ಸಲಹೆ ನೀಡಿದರು.

Ashika S

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

6 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

34 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

42 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

43 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

52 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago