Categories: ಉಡುಪಿ

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಶಾಲೆಗಳ ಆರಂಭ ಮುಂದೂಡಲು ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿ ಪ್ರದೇಶ ಹಾಗೂ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆರಂಭವನ್ನು 1 ವಾರಗಳ ಮುಂದೂಡುವಂತೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಯವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶದಂತೆ ಮೇ 31 ರಂದು ಆರಂಭಗೊಳ್ಳಲಿದೆ.

ಈ ಬಾರಿ ಮುಂಗಾರು ಮಳೆಯ ವಿಳಂಬದಿಂದಾಗಿ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.

ರಾಜ್ಯದ ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಪೂರೈಕೆ, ಬಿಸಿಯೂಟ ಹಾಗೂ ಶಾಲೆಯ ಪರಿಸರದ ಶುಚಿತ್ವ ಕಾಪಾಡಲು ಕಷ್ಟ ಸಾಧ್ಯವಾಗಿದೆ.

ಇದರಿಂದ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗೆ ತೊಂದರೆಯಾಗಲಿದೆ. ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಶಾಲಾ ಆರಂಭವನ್ನು ಒಂದು ವಾರಗಳ ಕಾಲ ಮುಂದೂಡಿಕೆಗೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಮುಖ್ಯ ಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಯವರಿಗೆ ಮನವಿ ಮಾಡಿದ್ದಾರೆ.

Ashika S

Recent Posts

ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ “ನೋವು ಮುಕ್ತ ಮಂಗಳೂರು” ಅಭಿಯಾನ

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…

2 mins ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…

16 mins ago

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರ ಬಂಧನ

ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್‌ ಕೊಲೆ ಪ್ರಕರಣ ಹಿನ್ನಲೆ  ಈ  ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…

32 mins ago

ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ

ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

51 mins ago

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು…

1 hour ago

ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿಯಲ್ಲಿ ಮುಳುಗಿ ದಾರುಣ ಸಾವು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…

1 hour ago