News Karnataka Kannada
Sunday, April 28 2024
ಉತ್ತರಕನ್ನಡ

ಉತ್ತರಕನ್ನಡ :ವಿದ್ಯುತ್ ಯೋಜನೆಗಳನ್ನು ಪ್ರಾರಂಭಿಸುವ ಕುರಿತಂತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸಭೆ

Sunil Kumar 07082021
Photo Credit :

ಬೆಂಗಳೂರು: ಉತ್ತರಕನ್ನಡ ಜಿಲ್ಲೆಗೆ ಸಮರ್ಪಕ ವಿದ್ಯುತ್ ಪೂರೈಕೆ,ಶಕ್ತಿ ಪರಿವರ್ತಕಗಳನ್ನು ಅಭಿವೃದ್ಧಿಪಡಿಸುವ ಹಾಗೂ ಜಿಲ್ಲೆಗೆ ಪೂರಕವಾಗಿರುವ ನೂತನ ವಿದ್ಯುತ್ ಯೋಜನೆಗಳನ್ನು ಪ್ರಾರಂಭಿಸುವ ಕುರಿತಂತೆ  ಇಂಧನ ಸಚಿವ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಸಚಿವ ಶ್ರೀ ಶಿವರಾಮ ಹೆಬ್ಬಾರ್ ಅವರು,ರಾಜ್ಯಕ್ಕೆ ಶೇಕಡಾ 22 ಪ್ರತಿಶತ ವಿದ್ಯುತ್ ಅನ್ನು ಉತ್ತರಕನ್ನಡ ಜಿಲ್ಲೆ ನೀಡಿದರು ಸಹ ಜಿಲ್ಲೆ ಹಲವಾರು ಸಮಸ್ಯೆಯನ್ನು ಎದುರಿಸುತ್ತಿದೆ ಎಂದರು. ಜಿಲ್ಲೆಯಲ್ಲಿ ನೂತನ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯ ಇರುವ ಹಿನ್ನೆಲೆಯಲ್ಲಿ ಉಪ ಕೇಂದ್ರಗಳನ್ನು ಸ್ಥಾಪನೆಗೆ ಮತ್ತು ಗ್ರಾಮೀಣ ಭಾಗದಲ್ಲಿ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಪಡೆಯಲು ಇರುವ ನಿಯಮಗಳನ್ನು ಸಡಿಲಗೊಳಿಸುವಂತೆ ಹಾಗೂ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಕೈಗೊಂಡಿರುವ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಇಂಧನ ಸಚಿವರಿಗೆ ಮನವಿ ಮಾಡಿದರು.

ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಇಂಧನ ಸಚಿವಸುನೀಲ್ ಕುಮಾರ್ ಅವರು ಮುಂದಿನ ದಿನಗಳಲ್ಲಿ ಉತ್ತರಕನ್ನಡ ಜಿಲ್ಲೆ ಪ್ರವಾಸ ಕೈಗೊಂಡು ಅಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಶಾಸಕ ದಿನಕರ ಕೆ ಶೆಟ್ಟಿ, ಸುನೀಲ್ ನಾಯ್ಕ ರೂಪಾಲಿ ನಾಯ್ಕ , ಆರ್.ವಿ.ದೇಶಪಾಂಡೆ ಹಾಗೂ ಇಂಧನ ಇಲಾಖೆ, ಕೆ.ಪಿ.ಟಿ.ಸಿ.ಎಲ್ ಮತ್ತು ಸಂಭಂದಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು