News Karnataka Kannada
Tuesday, May 07 2024
ಉತ್ತರಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಎರಡು ದಿನ ‘ಆರೆಂಜ್ ಅಲರ್ಟ್’ ಘೋಷಣೆ

Karwar Rain 05092021
Photo Credit :

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಶನಿವಾರ ತಡರಾತ್ರಿಯಿಂದ ಜೋರಾಗಿ ಮಳೆಯಾಗುತ್ತಿದೆ. ಎರಡು ದಿನಗಳಿಂದ ಬಿಟ್ಟು ಬಿಟ್ಟು ಬರುತ್ತಿದ್ದ ವರ್ಷಧಾರೆಯು, ನಿರಂತರವಾಗಿ ಬೀಳುತ್ತಿದೆ.

ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡೂ ದಿನಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ಹಾಗಾಗಿ, ಸಾರ್ವಜನಿಕರು, ಅದರಲ್ಲೂ ಮಕ್ಕಳು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ಕಟ್ಟಡಗಳು, ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಪ್ರವಾಸಿಗರು ಸಮುದ್ರಕ್ಕೆ ಇಳಿಯುವಾಗ ಬಹಳ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ತುರ್ತು ಸೇವೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸ್‌ಆ್ಯಪ್ ಸಂಖ್ಯೆ: 94835 11015 ಸಂಪರ್ಕಿಸಬಹುದು ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು