ಐಸಿಸ್ ವಿರುದ್ಧ ಕಾರ್ಯಾಚರಣೆ: ಭಟ್ಕಳ ಮೂಲದ ಓರ್ವ ಶಂಕಿತನ ಬಂಧನ

ಬೆಂಗಳೂರು :  ಉಗ್ರ ಸಂಘಟನೆ ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್‌) ನೇಮಕಾತಿ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಾರ್ಯಾಚರಣೆ ಮುಂದುವರೆದಿದ್ದು, ಪಾಕಿಸ್ತಾನ-ಆಫ್ಘಾನಿಸ್ತಾನದ ಐಸಿಸ್‌ ಕಮಾಂಡರ್‌ಗಳ ಜತೆ ನೇರ ಸಂಪರ್ಕ ಹೊಂದಿದ್ದ ಭಟ್ಕಳ ಮೂಲದ ಶಂಕಿತ ಉಗ್ರನನ್ನು ಶುಕ್ರವಾರ ಬಂಧಿಸಿದೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಜಫ್ರಿ ಜವ್ಹಾರ್‌ ದಾಮುದಿ ಅಲಿಯಾಸ್‌ ಅಬು ಹಝೀರ್‌ ಅಲ್‌ ಬದ್ರಿ ಬಂಧಿತನಾಗಿದ್ದು, ಆತನಿಂದ ಮೊಬೈಲ್‌ಗಳು, ಹಾರ್ಡ್‌ ಡಿಸ್ಕ್‌ಗಳು, ಎಸ್‌ಡಿ ಕಾರ್ಡ್‌ಗಳು ಹಾಗೂ ಡಿವಿಡಿ ಸೇರಿದಂತೆ ತಾಂತ್ರಿಕ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ನಾಲ್ಕು ವರ್ಷಗಳ ಹಿಂದೆ ಐಸಿಸ್‌ ಸಂಘಟನೆಯಲ್ಲಿ ತೊಡಗಿದ್ದ ಈತನ ಸೋದರ ಅದ್ನಾ ಹಸನ್‌ ದಾಮುದಿ ಎಂಬಾತನನ್ನು ಸಹ ಬಂಧಿಸಲಾಗಿತ್ತು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಲ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಕಾರ್ಯಾಚರಣೆ ನಡೆಸಿ ಐಸಿಸ್‌ ಸಂಘಟನೆ ನೇಮಕಾತಿಯಲ್ಲಿ ನಿರತರಾಗಿದ್ದ ಶಂಕಿತ ಉಗ್ರರಾದ ಉಮಾರ್‌ ನಿಸಾರ್‌, ತನ್ವೀರ್‌ ಅಹ್ಮದ್‌ ಭಟ್‌ ಹಾಗೂ ರಮೀಜ್‌ ಅಹ್ಮದ್‌ ಲೋನ್‌ ಎಂಬುವರನ್ನು ಬಂಧಿಸಲಾಗಿತ್ತು. ಈ ಶಂಕಿತ ಉಗ್ರರ ವಿಚಾರಣೆ ಹಾಗೂ ಆನಂತನಾಗ್‌ ಜಿಲ್ಲೆಯ ಅಚಬಲ್‌ ಪ್ರದೇಶದಲ್ಲಿನ ಆರೋಪಿಗಳ ಮನೆಗಳ ಶೋಧ ನಡೆಸಿದಾಗ ಸಿಕ್ಕಿದ್ದ ಕೆಲ ದಾಖಲೆಗಳನ್ನು ಪರಿಶೀಲಿಸಿದಾಗ ಭಟ್ಕಳದ ಜಫ್ರಿ ಕುರಿತು ಸುಳಿವು ಲಭಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಭೂತವಾದಿಗಳಿಂದ ಪ್ರಭಾವಿತನಾಗಿದ್ದ ಜಫ್ರಿ, ಭಾರತದಲ್ಲಿ ಸಂಘಟನೆ ಐಸಿಸ್‌ ಸಂಘಟನೆಗೆ ನೀರೆರೆದು ಬೆಳೆಸಲು ಟೊಂಕಕಟ್ಟಿದ್ದ. ಅಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ‘ಅಬೂ ಹಝೀರ್‌ ಅಲ್‌ ಬದ್ರಿ’ ಹೆಸರಿನಲ್ಲಿ ಖಾತೆಗಳನ್ನು ಹಾಗೂ ಯೂಟ್ಯೂಬ್‌ ಚಾನಲ್‌ ತೆರೆದು ಜಫ್ರಿ ಜಿಹಾದಿ ಬೋಧಿಸುತ್ತಿದ್ದ. ದಕ್ಷಿಣ ಭಾರತದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಆತ ಧರ್ಮ ಬೋಧನೆ ಮಾಡಿದ್ದ. ಸಾಮಾಜಿಕ ಜಾಣತಾಣಗಳಲ್ಲಿ ಆತನ ಧ್ವನಿ ಹೊಂದಿದ್ದ ವಿಡಿಯೋ ಹಾಗೂ ಆಡಿಯೋಗಳು ಆಪ್‌ಲೋಡ್‌ ಆಗಿದ್ದವು. ತನ್ನ ಮಾತುಗಳಿಂದ ಪ್ರಭಾವಿತರಾದ ಯುವಕರನ್ನು ಸೆಳೆದು ಐಸಿಸ್‌ ಸಂಘಟನೆಗೆ ನಿಯೋಜಿಸುತ್ತಿದ್ದ. ಆ ಯುವಕರಿಗೆ ಭಾರತದ ವಿರುದ್ಧ ನಡೆಯುವ ಜಿಹಾದಿ ಯುದ್ಧದಲ್ಲಿ ಪಾಲ್ಗೊಳ್ಳುವಂತೆ ಆರೋಪಿ ಪ್ರಚೋದಿಸುತ್ತಿದ್ದ ಎಂದು ಎನ್‌ಐಎ ಹೇಳಿದೆ.

ಪಾಕಿಸ್ತಾನ ಹಾಗೂ ಆಷ್ಘಾನಿಸ್ತಾನದ ಐಸಿಸ್‌ ನಾಯಕರುಗಳ ಜತೆ ನೇರ ಸಂಪರ್ಕ ಹೊಂದಿದ್ದ ಜಫ್ರಿ, ಐಸಿಸ್‌ ಕಮಾಂಡರ್‌ಗಳ ಸೂಚನೆ ಮೇರೆಗೆ ಭಾರತದಲ್ಲಿ ಐಸಿಸ್‌ಗೆ ಯುವಕರನ್ನು ನೇಮಕಾತಿ ಮಾಡುತ್ತಿದ್ದ. ಹಲವು ಯುವಕರು ಆತನಿಂದ ಪ್ರಭಾವಿತರಾಗಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಎನ್‌ಐಎ ವಿವರಿಸಿದೆ.

 

 

 

Raksha Deshpande

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

43 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago