ಕಾರವಾರ: ರಾಜ್ಯದಲ್ಲಿ ಸರಕಾರಿ ಅಂಬ್ಯುಲೆನ್ಸ್ ಸಮಸ್ಯೆ ಬಗೆಹರಿಸಲು ಕ್ರಮ ಎಂದ ಡಾ. ಕೆ. ಸುಧಾಕರ

ಕಾರವಾರ: ಸರ್ಕಾರಿ ಅಂಬ್ಯುಲೆನ್ಸ್ ಗಳ ಸೇವೆ ಮುಂದುವರೆದ ದೇಶದಲ್ಲಿ ಯಾವ ರೀತಿ ಇದೆಯೋ ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ನೀಡಿದ ವರದಿಯ ಮೇಲೆ ಟೆಂಡರ್ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ.

ಕಾರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 108 ತುರ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನಲೆ ಕಾರವಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮುಂದೆ ಇಂತಹ ಸಮಸ್ಯೆ ಆಗದಂತೆ ಮಾದರಿ ತುರ್ತು ಅಂಬ್ಯುಲೆನ್ಸ್ ಸೇವೆ ರಾಜ್ಯದಲ್ಲಿ ನೀಡಲಾಗುವುದು ಎಂದರು.

108 ತುರ್ತು ಅಂಬ್ಯುಲೆನ್ಸ್ ಸೇವೆ 2006- 07ರಲ್ಲಿ ಪ್ರಾರಂಭವಾಗಿತ್ತು. ಆಗ ಟೆಂಡರ್ ಮೂಲಕ ನಿರ್ವಹಣೆಗೆ ನೀಡಿರಲಿಲ್ಲ. ಸತ್ಯಂ ಎನ್ನುವ ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿತ್ತು. ಆಗ ಯಾವುದೇ ಸಮಸ್ಯೆ ಇರಲಿಲ್ಲ. ನಂತರ‌ಜಿ.ವಿ.ಕೆ ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿದೆ. ಆದರೆ ಇತ್ತೀಚಿಗೆ ಈ ಸಂಸ್ಥೆ ಸೇವೆ ಸರಿಯಾಗಿ ನೀಡುತ್ತಿಲ್ಲ ಎಂದರು.

ಕಳೆದ ಎರಡು ತಿಂಗಳಿಂದ ಜಿವಿಕೆ ಸಂಸ್ಥೆ ಸಿಬ್ಬಂದಿಗೆ ವೇತನ ನೀಡಿಲ್ಲ. ಹಾಗಂತ ಸರ್ಕಾರ ಸಂಸ್ಥೆಗೆ ಅನುದಾನ ನೀಡಿದೆ. ಒಂದೂವರೆ- ಎರಡು ತಿಂಗಳಲ್ಲಿ ಎಲ್ಲಾ ಸಮಸ್ಯೆ ಈಡೇರಲಿದೆ. ಅಲ್ಲಿಯವರೆಗೆ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ನೀಡಲಾಗುವುದು ಎಂದರು.

Sneha Gowda

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

17 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

35 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

51 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago