News Karnataka Kannada
Tuesday, May 07 2024
ಉತ್ತರಕನ್ನಡ

ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಭೇಟಿ

Thavar Chandh
Photo Credit :

ಅಂಕೋಲಾ : ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರು ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪುರಾಣ ಪ್ರಸಿದ್ಧ ಆತ್ಮಲಿಂಗದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ಭದ್ರತೆಯಲ್ಲಿ ಮುರ್ಡೇಶ್ವರದಿಂದ ಗೋಕರ್ಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ದೇವಾಲಯದ ಆಡಳಿತದ ವತಿಯಿಂದ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಬೆಳಿಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು, ದೇವಾಲಯದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಮೂಲಕ ಭಕ್ತರಿಗೆ ತಪಾಸಣೆ ನಡೆಸಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ದೇವಾಲಯದ ಸುತ್ತ ಮುತ್ತ ವಾಹನ ಸಂಚಾರ ಮತ್ತು ನಿಲುಗಡೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿತ್ತು. ಜಿಲ್ಲೆಗೆ ಸ್ವಾಗತ ದಕ್ಷಿಣ ಕನ್ನಡ, ಉಡುಪಿ ಪ್ರವಾಸದಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಶಿರೂರು ಗಡಿಯಲ್ಲಿ ಜಿಲ್ಲಾಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಿಯಾಂಗಾ. ಎಂ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು.

ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕ್ಷೇತ್ರ ಮುರ್ಡೇಶ್ವರಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವಾಲಯದ ಬೃಹತ್ ಗೋಪುರ ಎತ್ತರದ ಶಿವನ ವಿಗ್ರಹ ವೀಕ್ಷಿಸಿ ದೇವಾಲಯಕ್ಕೆ ತೆರಳಿ ಮುರ್ಡೇಶ್ವರ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಮುರ್ಡೇಶ್ವರ ಮಹಾದ್ವಾರದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ರಾಜ್ಯಪಾಲರನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು