ಉತ್ತರಕನ್ನಡ

ಜೆಡಿಎಸ್ ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಕಲಬುರಗಿ:‌ ಜೆಡಿಎಸ್ ಪಕ್ಷವನ್ನು ಅಷ್ಟು ಸುಲಭವಾಗಿ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ಬಲಿಷ್ಠವಾಗಿ ನಿಂತಿದೆ. ಬಿಟ್ಟು ಹೋದ ನಾಯಕರು ಗೆಲುವಿಗಾಗಿ ಏನೇನು ಮಾಡುತ್ತಿದ್ದಾರೆ ನನಗೂ ಗೊತ್ತಿಲ್ಲ. ಆ ವಿಚಾರ ಕುರಿತು ಮಾತನಾಡಲಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ನಗರದ ಮಣ್ಣೂರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಪತ್ರಕರ್ತರ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸಭೆಯ ಚುನಾವಣೆಗಳ ಬಳಿಕ ಮಾತನಾಡುತ್ತೇನೆ. ಸದ್ಯಕ್ಕೆ ಮೂರು ಪಕ್ಷಗಳಲ್ಲಿ ತಮ್ಮದೇ ಆಗಿರುವ ತಂತ್ರಗಳಿವೆ, ಲೆಕ್ಕಾಚಾರಗಳಿವೆ. ಬಹುತೇಕ ಅಡ್ಡ ಮತದಾನ ಸಾಧ್ಯವಾಗಲಿದೆ ಎನ್ನುವ ಲೆಕ್ಕಾಚಾರವೇ ಇಂದಿನ ದಿನಗಳ ಚರ್ಚೆಯೂ ಆಗಿದೆ. ಆದ್ದರಿಂದ ಈಗಲೇ ಏನೂ ಮಾತನಾಡುವಂತಿಲ್ಲ ಎಂದರು.

ಬಸವರಾಜ್ ಹೊರಟ್ಟಿ ಕುರಿತು ಮಾತನಾಡಿದ ಕುಮಾರಸ್ವಾಮಿ, 40 ವರ್ಷ ನಮ್ಮ ಪಕ್ಷದಲ್ಲೇ ಇದ್ದರಲ್ಲಾ ಆವಾಗ ಏನು ಮಾಡಿದ್ದೀರಿ. ನಾನು ಮುಖ್ಯಮಂತ್ರಿಯಾಗಿದ್ದಾಗ ನಿಮಗೆ ರಾಜ್ಯದಲ್ಲಿ ಎಷ್ಟು ಕಾಲೇಜುಗಳಿದ್ದವು. ನಿಮ್ಮ ಭಾಗದಲ್ಲಿ ಏನು ಆಗುತ್ತಿದೆ ಎನ್ನುವುದು ಗೊತ್ತಿರಲಿಲ್ಲ. ಈಗಲೂ ನೀವು ಗೆಲುವಿಗಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವುದು ಗೊತ್ತಿಲ್ಲವೇನು? ನಾನು ಇದ್ದಾಗ ನಾನೇ ಬ್ಯಾಟಿಂಗ್, ಫಿಲ್ಡಿಂಗ್, ಬೌಲಿಂಗ್ ಮಾಡಿದ್ದೇನೆ. ಅವರು ನಮಗೇನು ಮಾಡಿಲ್ಲ, ನಮ್ಮಲ್ಲಿಯೇ ಉಂಡು, ಕೊಂಡು ಹೋಗಿದ್ದಾರೆ ಎಂದು ಹೊರಟ್ಟಿ ಅವರ ನಡೆಯನ್ನು ಟೀಕಿಸಿದರು.

ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಏನು ಉಳಿದುಕೊಂಡಿಲ್ಲ. ಬರೀ ಜಾತಿ ವಿವಾದಗಳು, ಹಗರಣಗಳೇ ಪ್ರಮುಖವಾಗಿವೆ. “ನನಗೇನು ಚಡ್ಡಿ ವಿಚಾರ ಬೇಕಿಲ್ಲ” ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ. ಆದರೆ, ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರ್ಕಾರ ಮಾಡದಿದ್ದರೆ ಸಾಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Sneha Gowda

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

15 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

31 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

47 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago