ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ : ಶಿವರಾಮ ಹೆಬ್ಬಾರ್

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ನಿರ್ಮಾಣವಾಗಲಿರುವ ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ ಸಂಪೂರ್ಣ ಸರ್ಕಾರ ನಿರಾಶ್ರಿತರ ಜೊತೆಯಲ್ಲಿ ಸದಾ ಬೆನ್ನೆಲುಬಾಗಿ ನಿಲ್ಲಲಿದೆ,ಯಾರೂ ಉದ್ವೇಗ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಹೇಳಿದರು.

ಅಂಕೋಲಾದ ನಾಡವರ ಸಭಾ ಭವನದಲ್ಲಿ ನಡೆದ ಅಲಗೇರಿ, ಬೆಲೇಕೇರಿ, ಭಾವಿಕೇರಿ ಪಂಚಾಯಿತಿ ವ್ಯಾಪ್ತಿಯ ವಿಮಾನ ನಿಲ್ದಾಣ ನಿಲ್ದಾಣ ಕಾಮಗಾರಿಗೆ ಭೂಮಿ ಕಳೆಕೊಳ್ಳುವ ಜನರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಲಗೇರಿ ವಿಮಾನ ನಿಲ್ದಾಣ ಒಂದು ರಾಷ್ಟ್ರ ಮಟ್ಟದ ಯೋಜನೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಸಹ ವಿಮಾನ ನಿಲ್ದಾಣ ಆಗಬೇಕು ಎಂದು ಸಮ್ಮತಿ ವ್ಯಕ್ತಪಡಿಸಿವೆ ಈ ಕುರಿತು ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸುವ ಮೂಲಕ
ಯೋಗ್ಯ ರೀತಿಯಲ್ಲಿ ಚಿಂತನೆ ನಡೆಸುವಂತೆ ತಿಳಿಸಿದರು.

ಮೂಲ ಭೂಮಿಯನ್ನು ಕಳೆದುಕೊಂಡವರಿಗೆ ಆ ಭೂಮಿಯ ಸ್ಥಾನದ ಭೂಮಿ ನೀಡಲು ಸಾಧ್ಯವಿಲ್ಲದಿದ್ದರೂ ಪರ್ಯಾಯವಾಗಿ ಉತ್ತಮ ಬದುಕು ರೂಪಿಸಲು ಸಾಧ್ಯವಾಗುವಂತಹ ಸ್ಥಳ ನೀಡುವ ಮೂಲಕ ಸರ್ಕಾರ ನ್ಯಾಯಯುತವಾಗಿ ಸಹಕರಿಸಲಿದೆ
ಎಂದರು.

ಶಾಸಕಿ ರೂಪಾಲಿ ನಾಯ್ಕ ಮಾತನಾಡಿ ಉತ್ತಮ ಯೋಜನೆಗಳ ಮೂಲಕ ಈ ಭಾಗದ ಜನರು ಅಭಿವೃದ್ಧಿ ಆಗಬೇಕು ಎನ್ನುವುದು ತಮ್ಮ ಕನಸಾಗಿದ್ದು ಜನರ ಭಾವನೆಗಳ ಜೊತೆ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ, ನಿರಾಶ್ರಿತರಿಗೆ ಅಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ಪುನರ್ವಸತಿ ಕಲ್ಪಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಮಾತನಾಡಿದರು. ಜಿ.ಪಂ ಕಾರ್ಯನಿರ್ವಹಣ ಅಧಿಕಾರಿ ಪ್ರಿಯಾಂಗಾ, ಸಹಾಯಕ ಆಯುಕ್ತ ರಾಹುಲ್ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜು ಉಪಸ್ಥಿತರಿದ್ದರು.
ಸ್ಥಳೀಯರ ಪರವಾಗಿ ಸುರೇಶ ನಾಯಕ ಅಲಗೇರಿ, ದೇವರಾಯ ನಾಯ್ಕ, ಗೌರೀಶ ನಾಯಕ ಮಾತನಾಡಿ ಯೋಜನೆ ಕೈಬಿಡುವಂತೆ ಆಗ್ರಹಿಸಿದರು.

Sneha Gowda

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

28 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

42 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

58 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

2 hours ago