ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಕಾರು : ಓರ್ವ ಸಾವು

ಅಂಕೋಲಾ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಗುದ್ದಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಲಚೇತನ ವ್ಯಕ್ತಿಯೋರ್ವ ಮೃತ ಪಟ್ಟು ಇನ್ನೊರ್ವ ಗಾಯಗೊಂಡ ಘಟನೆ ತಾಲೂಕಿನ ಅವರ್ಸಾ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಪಟ್ಟಣದ ಅಜ್ಜಿಕಟ್ಟಾ ನಿವಾಸಿ ನಿಜಾಮುದ್ದೀನ್ ಯಾನೆ ರಿಜ್ವಾನ ಅಜಿಮುದ್ದೀನ್ ಶೇಖ್ (36) ಮೃತ ದುರ್ದೈವಿಯಾಗಿದ್ದು ವಿಕಲಚೇತನಾಗಿದ್ದ ಈತ ಗುಜರಿ ವ್ಯಾಪಾರ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದ. ಕಾರವಾರದಲ್ಲಿ ಅಬಕಾರಿ ಇಲಾಖೆಯಿಂದ ಗುಜರಿ ವಾಹನಗಳ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸಂದರ್ಭದಲ್ಲಿ ಅವರ್ಸಾದಲ್ಲಿ ಎರಡು ಆಕಳುಗಳು ಅಕಸ್ಮಾತ್ ರಸ್ತೆಗೆ ಅಡ್ಡವಾಗಿ ನುಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಜ್ವಾನನನ್ನು ಐ.ಆರ್. ಬಿ ಆಂಬ್ಯುಲೆನ್ಸ್ ಮೂಲಕ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಕ್ಸಿಜನ್ ವ್ಯವಸ್ಥೆಯಲ್ಲಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ತಲೆ ಭಾಗದಲ್ಲಿ ವಿಪರೀತ ರಕ್ತಸ್ರಾವ ಆದ ಪರಿಣಾಮ ಆತ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾರು ಚಾಲಕ ಅಶೋಕ ಶೇಣ್ವಿ ಎಂಬಾತನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

58 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago