ನೌಕರಿ ಭರವಸೆ ನೀಡಿ ಬ್ಲ್ಯಾಕ್ ಮೇಲ್- ಮೂವರ ಬಂಧನ

ಕಾರವಾರ: ಉದ್ಯೋಗ ನೌಕರಿ ಕೊಡಿಸುವುದಾಗಿ ಪರ ಊರಿಗೆ ಕರೆಸಿಕೊಂಡು ಕೂಡಿಹಾಕಿ ಚಿತ್ರೀಕರಣ ಮಾಡಿಕೊಂಡ ನಗ್ನ ಫೋಟೊ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿರಸಿಯ ಉಂಚಳ್ಳಿಯ ಕೆರೆಜಡ್ಡಿಯ ಅಜಿತ ಶ್ರೀಕಾಂತ ನಾಡಿಗ (25), ಬನವಾಸಿ ರಸ್ತೆಯ ಗೋಲಗೇರಿ ಓಣಿಯ ಧನುಶ್ಯ ಕುಮಾರ ದಿಲೀಪಕುಮಾರ ಶೆಟ್ಟಿ (25) ಹಾಗೂ ಶಿವಮೊಗ್ಗ ಗೋಪಾಲದ ರಂಗನಾಥ ಬಡಾವಣೆಯ ಪದ್ಮಜಾ ಡಿ. ಎನ್. (50) ಅವರ ಮೇಲೆ ಶಿರಸಿಯ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇವರುಗಳು ದೂರುದಾರರಿಗೆ ಸರ್ಕಾರಿ ಕಾಯಂ ಉಪನ್ಯಾಸಕ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸಿ ಕಳೆದ ಜ.17 ರಂದು ಶಿವಮೊಗ್ಗಕ್ಕೆ ಕರೆಸಿಕೊಂಡಿದ್ದರು. ಬಳಿಕ ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶದಿಂದ ಕೋಣೆಯಲ್ಲಿ ಕೂಡಿಹಾಕಿ ನಗ್ನಗೊಳಿಸಿ, ದೂರುದಾರರ ಫೋಟೊ ಹಾಗೂ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು. ನಂತರ ಜ.18 ರಂದು ದೂರುದಾರರ ತಂದೆಯನ್ನು ಭೇಟಿ ಮಾಡಿ ವಿಡಿಯೋ ಡಿಲೀಟ್ ಮಾಡಬೇಕು ಎಂದಾದರೆ 15 ಲಕ್ಷ ರೂ ನೀಡಬೇಕು ಎಂದು ಬೇಡಿಕೆ ಇಟ್ಟರು. ಹಣ ಕೊಡದೇ ಇದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರು ದಾಖಲಾದ 24 ತಾಸಿನಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Swathi MG

Recent Posts

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

11 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

30 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

57 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 hour ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago