News Karnataka Kannada
Monday, April 29 2024
ಉತ್ತರಕನ್ನಡ

ಭಟ್ಕಳದ ಮಾರುಕೇರಿಯಲ್ಲಿ ಒಂದೇ ದಿನ ತಂದೆ- ಮಗಳ ಸಾವು

Karvar Kavya 13072021
Photo Credit :

ಕಾರವಾರ: ತಂದೆ – ಮಗಳು ಒಂದೇ ದಿನ ಕೊನೆಯುಸಿರೆಳೆದ ಘಟನೆ ಭಟ್ಕಳದ ಮಾರುಕೇರಿಯಲ್ಲಿ ನಡೆದಿದೆ.

ಉಸಿರಾಟದ ತೊಂದರೆಯಿಂದ ಮಗಳು ಹಾಗೂ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಮಾರುಕೇರಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕಾವ್ಯಾ ರಾಮ ಗೊಂಡ (15) ಉಡುಪಿಯ ಆಸ್ಪತ್ರೆಯಲ್ಲಿ ಮೃತಪಟ್ಟರೆ, ತಂದೆ ರಾಮ ಸುಕ್ರ ಗೊಂಡ (46) ಸ್ವಗೃಹದಲ್ಲಿ ನಿಧನರಾದರು.

ಭಟ್ಕಳದ ಕಿತ್ತೂರು ರಾಣಿ ಚನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಎರಡು ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ, ಉಸಿರಾಟದ ತೀವ್ರ ತೊಂದರೆ ಕಾಣಿಸಿಕೊಂಡಿತು. ಹಾಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಳು.

ಈ ಅವಧಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಮನೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದರಿಂದ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು