News Karnataka Kannada
Thursday, May 02 2024
ಉತ್ತರಕನ್ನಡ

ಮನೆ ಬೀಗ ಒಡೆದು ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ದರೋಡೆ

Robbery
Photo Credit :

ಮಳವಳ್ಳಿ:  ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ರೂ. ನಗದು ಹಣ ಮತ್ತು ಚಿನ್ನ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಗಟ್ಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಗದೀಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 1.5 ಲಕ್ಷ ರೂ.ನಗದು, 22 ಗ್ರಾಂ. ತೂಕದ ಚಿನ್ನದ ನೆಕ್ಲೇಸ್, 25 ಗ್ರಾಂ. ತೂಕದ ಚಿನ್ನದ ಸರ, ಮೂರು ಚಿನ್ನದ ಉಂಗುರ ಸೇರಿದಂತೆ 55 ಗ್ರಾಂ ಚಿನ್ನ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಮನೆಯ ಮಾಲೀಕ ಜಗದೀಶ್ ದೂರು ನೀಡಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣ್ ಪ್ರಸಾದ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು