ಮಾ.15 ರಿಂದ ಶಿರಸಿ ಮಾರಿಕಾಂಬಾ ಜಾತ್ರೆ

ಶಿರಸಿ : ರಾಜ್ಯದ ಅತಿದೊಡ್ಡ ಜಾತ್ರೆಯಾದ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆಯು ಮಾ.15 ರಿಂದ 23 ವರೆಗೆ ನಡೆಯಲಿದ್ದು, ಶುಕ್ರವಾರ ಜಾತ್ರೆಯ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.‌

ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ, ಉಪಾಧ್ಯಕ್ಷ ಸುದೇಶ ಜೋಗಳೇಕರ ಹಾಗೂ ಧರ್ಮದರ್ಶಿಗಳಾದ ಸುಧೀರ ಹಂದ್ರಾಳ, ವತ್ಸಲಾ ಹೆಗಡೆ, ಶಿವಾನಂದ ಶೆಟ್ಟಿ ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.‌

ನಂತರ ಮಾತನಾಡಿದ ಆರ್.ಜಿ.ನಾಯ್ಕ, ಫಾಲ್ಗುಣ ಶುದ್ಧ ಅಷ್ಟಮಿ ಮಾ.15 ರಂದು ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಕಲ್ಯಾಣ ಪ್ರತಿಷ್ಠೆ ರಾತ್ರಿ 11.17 ರಿಂದ 11.27 ರೊಳಗೆ ಸಭಾಮಂಟಪದ ರಂಗ ಮಂಟಪದಲ್ಲಿ ನಡೆಯಲಿದೆ.

ನಂತರ ರಾಜೋಪಚಾರದಿ ವಿನಿಯೋಗಗಳು ರಾತ್ರಿ 11.27 ರ ನಂತರ ನಡೆಯಲಿದ್ದು, ಮಾ.16 ತ್ರಯೋದಶಿಯಂದು ಬೆಳಿಗ್ಗೆ 7:03ರಿಂದ ರಥೋತ್ಸವ ಆರಂಭವಾಗಿ ಮಧ್ಯಾಹ್ನ 12.45 ರಿಂದ 12.57ರ ಒಳಗೆ ಬಿಡಕಿ ಬೈಲಿನ ಜಾತ್ರಾ ಸ್ಥಳದ ಪೀಠದಲ್ಲಿ ಸ್ಥಾಪನೆ ಆಗಲಿದೆ ಎಂದರು.

Sneha Gowda

Recent Posts

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

10 mins ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

33 mins ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

53 mins ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

1 hour ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

2 hours ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

2 hours ago