ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಾದೇವ ವೇಳಿಪ ನಿಧನ

ಕಾರವಾರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ವಯೋ ಸಹಜತೆಯ ಅನಾರೋಗ್ಯದಿಂದ ಅಸ್ತಂಗತರಾದರು. ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಟೋಳಿ ಗ್ರಾಮದವರಾದ ಮಹಾದೇವ ವೇಳಿಪ‌ ಅವರು ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ರಾಜ್ಯ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ನೂರಾರು ಬಗೆಯ ಗೆಡ್ಡೆ ಗೆಣಸುಗಳನ್ನು ಉಳಿಸಿ ಬೆಳಸುವ ಜೊತೆ ಅರಣ್ಯ ಸಂರಕ್ಷಣೆ ಸಹ ಮಾಡಿದ್ದ ವೇಳಿಪ ಅವರು, ಜನಪದ ಹಾಡುಗಳನ್ನು ಸಾವಿರ ಲೆಕ್ಕದಲ್ಲಿ ನಿರಂತರ ಹಾಡುತ್ತಿದ್ದರು. ಪರಿಸರದ ಬಗ್ಗೆ ಅಪಾರ ಜ್ಞಾನ, ಕಾಳಜಿ ಹೊಂದಿದ್ದ ಅವರ ಸಾಧನೆಗೆ 2021ರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸರಕಾರ ಗೌರವಿಸಿದೆ.

ಕೃಷಿಕರಾಗಿದ್ದ ಅವರು ಹಲವು ವರ್ಷಗಳಿಂದ ಬುಡಕಟ್ಟು ಸಂಸ್ಕೃತಿ ಹಾಗೂ ಕಲೆಯನ್ನು ಬೆಳೆಸಿ ಉಳಿಸುವ ಕಾರ್ಯ ಮಾಡಿದ್ದಾರೆ. ಹಕ್ಕಿಗಳ ಕೂಗನ್ನು ಆಧರಿಸಿ ಯಾವ ಪಕ್ಷಿ ಎಂದು ನಿಖರವಾಗಿ ಹೇಳುತ್ತಿದ್ದರು. ವೇಳಿಪ ಅವರು ಅಪಾರ ಬಂಧು-ಬಳಗ ಅಗಲಿದ್ದಾರೆ.

Gayathri SG

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

16 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

17 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

29 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

32 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

54 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 hour ago