ಹೊನ್ನಾವರ: ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಗಣಿ ವಿಜ್ಞಾನ ಮತ್ತು ಪೊಲೀಸ್ ಇಲಾಖೆಯವರು ಕಾರ್ಯಾಚರಣೆ ನಡೆಸಿ 9 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇದುವರೆಗೆ ಮರಳುಗಾರಿಕೆಗೆ ಪರವಾನಗಿ ಇಲ್ಲವಾದರೂ ಜಿಲ್ಲೆಯ ಶರಾವತಿ, ಅಘನಾಶಿನಿ, ಗಂಗಾವಳಿ ನದಿಗಳಲ್ಲಿ ಅಕ್ರಮವಾಗಿ ಮರಳು ತೆಗೆದು ರಾತ್ರಿ ಸಮಯದಲ್ಲಿ ಸಾಗಿಸಲಾಗುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದವು.
ಈ ದಿಶೆಯಲ್ಲಿ ದಡೀರ್ ದಾಳಿ ನಡೆಸಿ ದ ಅಧಿಕಾರಿಗಳು ಹೊನ್ನಾವರದ ಮಾವಿನಕೂರ್ವೆ,ಹೊಸಾಡ, ಕಳಸನಮೂಟೆ ಭಾಗದಲ್ಲಿ ಮರಳುಗಾರಿಕೆಗೆ ಬಳಸುತ್ತಿದ್ದರು ಎನ್ನಲಾದ 9 ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ.
ಹೊನ್ನಾವರ ಸಿ.ಪಿ.ಐ ಶ್ರೀಧರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿ.ಎಸ್. ಐ ಶಶಿಕುಮಾರ್, ಮಹಾಂತೇಶ ಹಾಗೂ ಸಿಬ್ಬಂದಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.