ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶೃಂಗೇರಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.
ಶೃಂಗೇರಿ ಶಾರದಾ ಪೀಠಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದು, ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ರಾಷ್ಟ್ರಪತಿ ಆಗಮನದ ಹಿನ್ನೆಲೆ ಪೊಲೀಸರ ಬಿಗಿ ಭದ್ರತೆ ಮಾಡಲಾಗಿದ್ದು, ಎನ್ ಎಸ್ ಜಿ ತಂಡದೊಂದಿಗೆ 800-100 ಪೊಲೀಸರು ನಿಯೋಜನೆಯಾಗಿದ್ದಾರೆ. ಕಳೆದ 2 ದಿನಗಳಿಂದ ಶೃಂಗೇರಿ ಸುತ್ತಮುತ್ತಲಿನ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಿಸಲಾಗಿದ್ದು, 30 ಅಡಿಗೆ ಒಬ್ಬ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಈ ವೇಳೆ ಕೋವಿಂದ್ ದಂಪತಿ ಜೊತೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದ್ದರು.