ಉತ್ತರಕನ್ನಡ

ಸಿದ್ದಾಪುರ: ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ

ಸಿದ್ದಾಪುರ:  ತಾಲೂಕಿನ ಕಡಕೇರಿಯಲ್ಲಿ ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ತೆಂಗಿನ ಮರ ಬಿದ್ದು ನಾಲ್ವರು ಗಾಯಗೊಂಡ ಘಟನೆ  ಶುಕ್ರವಾರ ನಡೆದಿದೆ.

ಮನೆಯ ಪಕ್ಕದಲ್ಲಿ ಅಡಿಕೆ ಸಸಿ ಬೆಳೆಸಲು ಕವರ್ ಗೆ ಮಣ್ಣು ತುಂಬುತ್ತಿರುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ತೆಂಗಿನಮರ ಮನೆ ಮೇಲೆ ಬಿದ್ದಿದೆ.

ಮರ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿ, ಹೊನ್ನಪ್ಪ ಕೃಷ್ಣ ನಾಯ್ಕ (40), ದಯಾನಂದ ಕೃಷ್ಣ ನಾಯ್ಕ (35), ಮಕ್ಕಳಾದ ಧವನ್ ದಯಾನಂದ ನಾಯ್ಕ (9), ಹಾಗೂ ಹೇಮಶ್ರೀ ಹೊನ್ನಪ್ಪ ನಾಯ್ಕ ( 7) ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Swathi MG

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

11 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

44 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago