3 ಕೋಟಿ ರೂ. ವಚ್ಚದಲ್ಲಿ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ನೂತನ ರಥ ನಿರ್ಮಾಣ

ಇತಿಹಾಸ ಪ್ರಸಿದ್ಧ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ನೂತನ ರಥ ನಿರ್ಮಾಣವಾಗಲಿದ್ದು, ನೂತನ ಮಹಾಸ್ಯನಂದ ರಥದ ಮರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ನಡೆಸಲಾಯಿತು.

ಮಹಾಸ್ಯಂದ ರಥ ನಿರ್ಮಾಣ ಕಾರ್ಯಕ್ಕೆ ಶುಕ್ರವಾರ ಅಧಿಕೃತ ಚಾಲನೆ ನೀಡಲಾಗಿದ್ದು, 3 ಕೋಟಿ ರೂ ವಚ್ಚದಲ್ಲಿ ರಥ ನಿರ್ಮಾಣವಾಗಲಿದೆ. ದಾಸನಕೊಪ್ಪ ಸರ್ಕಲ್ ನಿಂದ ಬನವಾಸಿಯ ಪ್ರಮುಖ ಬೀದಿಗಳಲ್ಲಿ ರಥಕ್ಕೆ ನಿರ್ಮಾಣವಾಗಲಿರುವ ಮರದ ಮೆರವಣಿಗೆ ನಡೆಯಿತು.

ಡೊಳ್ಳು ಕುಣಿತ ಹಾಗೂ ಪೂರ್ಣಕುಂಬದ ಸ್ವಾಗತ ಮಾಡಲಾಯಿತು. ದೇವಸ್ಥಾನದ ಮುಂಭಾಗ ರಥಕ್ಕೆ ನಿರ್ಮಾಣ ಮಾಡಲಿರುವ ಮರಗಳನ್ನು ತಂದು ಪೂಜೆ ಸಲ್ಲಿಸಲಾಯಿತು. ನಂತರ ರಥ ನಿರ್ಮಿಸಲಿರುವ ಶಿಲ್ಪಿಗಳಿಗೆ ವೀಳ್ಯ ಕೊಟ್ಟು ಅಧಿಕೃತವಾಗಿ ರಥ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಕುಂಬಾಶಿಯ ಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯ ಅವರಿಗೆ ರಥ ನಿರ್ಮಾಣಕ್ಕೆ 20 ಲಕ್ಷ ರೂ ಚೆಕ್ ನೀಡಿ ವೀಳ್ಯ ನೀಡಲಾಯಿತು.

1608 ರಲ್ಲಿ ಸೋಂದಾ ರಾಮಚಂದ್ರ ನಾಯಕ ಅವರು ಮಹಾಸ್ಯಂದನ ರಥ ನೀಡಿದ್ದರು. ಸುಮಾರು 400 ಹಿಂದಿನ ರಥ ಶಿಥಿಲಗೊಂಡ ಹಿನ್ನೆಲೆಯಲ್ಲಿ ನೂತನ ರಥ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಬಿಜೆಪಿ ಮುಖಂಡ ವಿ. ಎಸ್ ಪಾಟೀಲ್, ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್. ಶಿವಯೋಗಿ ಉಳ್ಳಾಗಡ್ಡಿ ಇದ್ದರು.

Sneha Gowda

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

13 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

22 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

25 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

37 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

39 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

40 mins ago