ಉತ್ತರಕನ್ನಡ

ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಅಪಘಾತ: ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃತ

ಅಂಕೋಲಾ:  ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃತ ಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಹೊನ್ನಾಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಹನಾ ಶ್ಯಾನಭಾಗ(43) ಅಪಘಾತದಲ್ಲಿ ಮೃತ ಮಹಿಳೆಯಾಗಿದ್ದು, ಮದುವೆ ಸಮಾರಂಭಕ್ಕೆ ಯಲ್ಲಾಪುರದಿಂದ ಅಂಕೋಲಾಗೆ ಬರುವಾಗ ಅಪಘಾತ ಸಂಭವಿಸಿದೆ.

ಓಮಿನಿ ವಾಹನಕ್ಕೆ ಹೊನ್ನಾಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಅಚ್ಚ್ಯುತ ಶಾನಭಾಗ ಅವರ ಹೆಣ್ಣು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಅಂಕೋಲಾ ಪಿ.ಎಸ್.ಐ ಮಹಾಂತೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿ, ತನಿಖೆ ಕೈಗೊಂಡಿದ್ದಾರೆ.

Sneha Gowda

Recent Posts

‘ಬಿರಿಯಾನಿ ಹಟ್’ ಹೊಟೇಲ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ರೂ.ನಷ್ಟ

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…

45 seconds ago

ಉಡುಪಿ : ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…

12 mins ago

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

23 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

28 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

1 hour ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 hour ago