News Karnataka Kannada
Saturday, May 04 2024
ಉತ್ತರಕನ್ನಡ

ಭಟ್ಕಳ:  ಗುಡ್ಡ ಕುಸಿದು ಮೃತಪಟ್ಟ ಕುಟುಂಬಕ್ಕೆ ಪರಿಹಾರ ವಿತರಿಸಿದ ಮುಖ್ಯಮಂತ್ರಿ

Chief Minister distributes compensation to the families of those who died in a landslide
Photo Credit : By Author

ಭಟ್ಕಳ: ಭೀಕರ ಮಳೆಯಿಂದ ಗುಡ್ಡ ಕುಸಿದು  ಸಾವನ್ನಪ್ಪಿದ ಕುಟುಂಬಕ್ಕೆ ಸಾಂತ್ವನ ಹೇಳಿ ಸಾವನ್ನಪ್ಪಿದ ಪ್ರತಿಯೊಬ್ಬರಿಗೂ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಅವರ  ಕುಟುಂಬದ ಮಕ್ಕಳಿಗೆ  ಪಿ.ಜಿ ವರೆಗೆ ಉಚಿತ ಶಿಕ್ಷಣ ಮತ್ತು  ವಸತಿ ಸೌಕರ್ಯವನ್ನು  ನೀಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಗುಡ್ಡ ಕುಸಿತದಿಂದ ಸಾವಿಗೀಡಾದ ಪ್ರದೇಶವಾದ  ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಗೆ  ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂತಹ ಘಟನೆ ನಿಜಕ್ಕೂ ವಿಷಾದನೀಯ,  ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ  ಯಾವ  ಮನೆಗಳಿಗೆ ತೊಂದರೆ ಇದೆ ಅಂತಹ ಮನೆಯವವರನ್ನು  ಈಗಾಗಲೇ ಸ್ಥಳ ಬದಲಾವಣೆ ಮಾಡಲು ನೋಟಿಸ್ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಈಗಾಗಲೇ ಅನೇಕ ಮನೆಗಳಿಗೆ, ಬೆಳೆಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ನೀರು  ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ ಹಾಗೂ ಮೀನುಗಾರರಿಗೂ ತೊಂದರೆಯಾಗಿದ್ದು ಈ ಕೂಡಲೇ ವರದಿ ತೆಗೆದುಕೊಂಡು ಪರಿಹಾರ ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು 115 ಹಳ್ಳಿಗಳಿಗೆ ತೊಂದರೆಯುಂಟಾಗಿದ್ದು 4 ಜನ ಸಾವನ್ನಪ್ಪಿದ್ದಾರೆ. 600 ಮನೆಗಳು ಸಂಪೂರ್ಣ ನಾಶವಾಗಿದ್ದು ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಈಗಾಗಲೇ ರಾಜ್ಯದ ಮೂಲಭೂತ ಸೌಕರ್ಯಗಳಿಗೆ ತುರ್ತು 500 ಕೋಟಿ ಬಿಡುಗಡೆ ಮಾಡಲಾಗಿದೆ ಇನ್ನೂ ಹೆಚ್ಚು ಹಾನಿಯಾಗುವ ಸಂಭವ ಇದ್ದು ಜಿಲ್ಲೆಗೆ ವಿಶೇಷ ಅನುದಾನ ನೀಡಲಾಗುವುದು ಎಂದರು. ಜಿಲ್ಲೆಯ ಬಹು ದಿನಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣದ ಸಂಪೂರ್ಣ ಮಾಹಿತಿ ತೆಗೆದುಕೊಂಡು ಅದಕ್ಕೆ ಸಂಬಂಧಿಸಿದಂತೆ ಕಾರ್ಯ ಕೈಗೊಳ್ಳಲಾಗುವುದು  ಹಾಗೂ ಈಗ ಇರುವ ಆಸ್ಪತ್ರೆಗಳಿಗೆ ವೈದ್ಯರ ಕೊರತೆಯಿದ್ದು ಅದನ್ನು ಕೂಡ ನಿವಾರಿಸಲಾಗುವುದು

ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಂದಾಯ ಇಲಾಖೆ ಸಚಿವ ಆರ್. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಇಲಾಖೆ ಸಚಿವ ಶಿವರಾಂ ಹೆಬ್ಬಾರ್,  ಹಾಗೂ ಇನ್ನಿತರ ಶಾಸಕರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು