News Karnataka Kannada
Sunday, April 28 2024
ಉತ್ತರಕನ್ನಡ

ಕಾರವಾರದ ವಿವಿಧ ಕಡೆ ಬೂತ್ ವಿಜಯ ಅಭಿಯಾನ

Booth Victory Campaign in various parts of Karwar
Photo Credit : By Author

ಕಾರವಾರ: ಕೇಂದ್ರ, ರಾಜ್ಯ ಸರ್ಕಾರಗಳ ಯೊಜನೆಗಳನ್ನು ಮನೆ ಮನೆಗೂ ತಲುಪಿಸಿ, ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಕಾರವಾರ ಅಂಕೊಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ವಿನಂತಿಸಿದರು.

ಭಾರತೀಯ ಜನತಾ ಪಕ್ಷ ಕಾರವಾರ ಗ್ರಾಮೀಣ ಮಂಡಲದ ವತಿಯಿಂದ ತಾಲ್ಲೂಕಿನ ಮಲ್ಲಾಪುರ, ಕದ್ರಾ ಹಾಗೂ ಘಾಡಸಾಯಿ ಹಳಗಾ ವ್ಯಾಪ್ತಿಯ ಬೂತ್‌ ಸಂಖ್ಯೆ 46,47,45 ಹಾಗೂ 53 ಹಮ್ಮಿಕೊಂಡಿದ್ದ ಬೂತ್‌ ವಿಜಯ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೂತ್ ವಿಜಯ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕದ್ರಾ, ಮಲ್ಲಾಪುರ, ಹಳಗಾ ಬೂತ್‌ ಸಮಿತಿಯನ್ನು ಪರಿಶೀಲಿಸಿ 12 ಜನರ ತಂಡವನ್ನು ರಚಿಸಲಾಗಿದೆ. ಅವರೆಲ್ಲರ ಮಾಹಿತಿಯನ್ನು ಪಡೆದು ಪರಿಶೀಲಿಸಲಾಗಿದೆ. ಪಂಚರತ್ನ ಸಮಿತಿಯನ್ನೂ ಕೂಡ ಪರಿಶೀಲಿಸಿ ರಚಿಸಿದ್ದು. ಪೇಜ್‌ ಪ್ರಮುಖರ ನೇಮಕ, ವಾಟ್ಸ್‌ಪ‌ ಗ್ರೂಪ್‌ಗಳ ರಚನೆ ಮಾಡುವ ಬಗ್ಗೆ ವಿವರಿಸಲಾಗಿದೆ. ಪಕ್ಷ ಸಂಘಟನೆಗೆ ನೀಡಿದ ಯೋಜನೆಯನ್ನು ಕಾರ್ಯಗಳನ್ನು ಶಕ್ತಿಮೀರಿ ಮಾಡಬೇಕು ಎಂದರು.

ಪಕ್ಷ ಸಂಘಟನೆಯಲ್ಲಿ ಬೂತ್ ಕಮಿಟಿ ಅಧ್ಯಕ್ಷರ ಮತ್ತು ಸದಸ್ಯರ ಪಾತ್ರ ಮಹತ್ವದ್ದಾಗಿರುತ್ತದೆ. ಪಕ್ಷವು ನೀಡಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯ ಪ್ರತಿ ಬೂತ್‌ನಲ್ಲಿ ಮಾಡಬೇಕು ಮತ್ತು ಪಕ್ಷ ಬಲವರ್ದನೆಗೆ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರದ ಪ್ರಮುಖರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಪಕ್ಷದ ಬೂತ್ ಕಮಿಟಿಯವರು, ಕಾರ್ಯಕರ್ತರು, ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು