ಕಾರವಾರ: ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಇಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಚಾಲಕ ಬಡೇಸಾಬ್ ಮುಜಾವರ್ಗೆ ಗಂಭೀರ ಗಾಯವಾಗಿದೆ. ನೌಕಾನೆಲೆಗೆ 30ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಬಸ್ ಕರೆದೊಯ್ಯುತ್ತಿತ್ತು.
ಬಸ್ನಲ್ಲಿದ್ದ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ಬಸ್ ಡಿಪೋ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದಾರೆ. ಇನ್ನೂ ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿಯಿಂದ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಬಸ್ ಸ್ಕಿಡ್ ಆಗಿದೆ ಎಂದು ಹೇಳಲಾಗಿದೆ.