News Karnataka Kannada
Monday, April 29 2024
ಉತ್ತರಕನ್ನಡ

ಸಂಸದ ಅನಂತ್ ಕುಮಾರ‌ ವಿರುದ್ಧ ಪ್ರಕರಣ ದಾಖಲು

New Project 2024 01 15t101704.017
Photo Credit : News Kannada

ಕಾರವಾರ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಅನಂತ್ ಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಭಾನುವಾರ(ಜ.14) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ಕುಮಟಾದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅನಂತಕುಮಾರ ಹೆಗಡೆ ಅವರು, ‘ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ಮಾದರಿಯಲ್ಲಿ ಕೆಡವಬೇಕು. ಹಿಂದೂಗಳು ತಮಗಾದ ಅಪಮಾನಕ್ಕೆ ಸೇಡು ತೀರಿಸಿಕೊಳ್ಳುವವರೆಗೆ ಸುಮ್ಮನಿರಬಾರದು’ ಎಂದು ಪ್ರಚೋದನಕಾರಿ ಭಾಷಣವನ್ನು ಮಾಡಿದ್ದರು.

‘ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಹೇಳಿಕೆ ನೀಡಿದ್ದರಿಂದ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಹೇಳಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು