ರಕ್ಷಣಾ ಇಲಾಖೆ ಜಮೀನಿನಲ್ಲಿ ಮೋದಿ ಚುನಾವಣಾ ಪ್ರಚಾರ ಮಾಡಿದಲ್ಲಿ ಸುಮ್ಮನಿರಲ್ಲ

ಕಾರವಾರ: ರಕ್ಷಣಾ ಇಲಾಖೆ ವ್ಯಾಪ್ತಿಯಲ್ಲಿ ಬಿಜೆಪಿಯು ಕಾರವಾರ-ಅಂಕೋಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಸಲಿದೆ ಎನ್ನುವ ಮಾಹಿತಿ ಇದೆ. ಅವರ ಕಾರ್ಯಕ್ರಮಕ್ಕೆ ರಕ್ಷಣಾ ಇಲಾಖೆಯ ಜಮೀನು ಬಳಸಿಕೊಂಡರೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕಾಂಗ್ರೆಸ್ ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಕ್ಷಣಾ ಇಲಾಖೆ ಜಮೀನಿನಲ್ಲಿ ಚುನಾವಣಾ ಪ್ರಚಾರ ಮಾಡಿದರೆ ಅದು ನೀತಿ ಸಂಹಿತೆ ಉಲ್ಲಂಘನೆ ಆಗಲಿದೆ ಎಂದ ಅವರು ಇಡಿ, ಸಿಬಿಐ, ಐಟಿ, ರಕ್ಷಣಾ ಇಲಾಖೆ ಸೇರಿದಂತೆ ಎಲ್ಲವನ್ನೂ ಬಿಜೆಪಿ ಎಲ್ಲವನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಅವರು ದೂರಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ ಅವರು ರಾಜ್ಯಕ್ಕೆ ಬಂದು ಎಷ್ಟೇ ಪ್ರಚಾರ ಮಾಡಲಿದೆ. ಆದರೆ, ರಾಜ್ಯದ ಜನ ತ್ರಿವಿಕ್ರಮರು, ಮುಂದಿನ ಚುನಾವಣೆಯಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹರಿಪ್ರಸಾದ ತಿಳಿಸಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಒಂದೆರಡು ಕಡೆ ಇರುವ ಅಸಮಾಧಾನವನ್ನು ಶಮನಗೊಳಿಸಲಾಗಿದೆ. ಜಿಲ್ಲೆಯ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದರು.

`ನಾ ಖಾವೂಂಗಾ ನಾ ಖಾನೆದೂಂಗಾ’ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಕೋ ಖಾನೆ ದೂಂಗಾ ಜೌರ್ ಕಿಸಿಕೋ ಖಾನೆದೂಂಗಾ ಎಂದು ಹೇಳುತ್ತಿದ್ದಾರೆ. ಎಸ್ಬಿಐ ಮತ್ತು ಎಲ್ಐಸಿಗೆ ಅದಾನಿ ಅವರು 75 ಸಾವಿರ ಕೋಟಿ ಪಂಗನಾಮ ಹಾಕಿದ್ದಾರೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷದವರು ಚುನಾವಣೆಗೂ ಮೊದಲೇ ಮುಖ್ಯಮಂತ್ರಿ ಘೋಷಣೆ ಮಾಡುವುದಿಲ್ಲ. ಶಾಸಕರು ಆಯ್ಕೆಯಾದ ನಂತರದಲ್ಲಿ ಅವರು ಕುಳಿತು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಆದರೆ, ಬಿಜೆಪಿಯಲ್ಲಿ ಹಾಗಿಲ್ಲ. ಮುಖ್ಯಮಂತ್ರಿ ಆಗಬೇಕೆದಂತೆ ಎರಡು ಸಾವಿರ ಕೋಟಿ ಕೊಡಬೇಕು. ಇದನ್ನು ಬಿಜೆಪಿ ಶಾಶಕ ಬಸವರಾಜ ಪಾಟೀಲ ಯತ್ನಾಳ ಅವರೇ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Sneha Gowda

Recent Posts

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

7 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

10 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

21 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

25 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

60 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago